ಸುಳ್ಯ: ಕೆ.ವಿ.ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ವು ವಿದ್ಯಾರ್ಥಿ ಪ್ರವೇಶವನ್ನು 100ರಿಂದ 150ಕ್ಕೆ ಹೆಚ್ಚಿಸಲು ಅನುಮೋದನೆ ನೀಡಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡೀನ್ ಡಾ. ನೀಲಾಂಬಿಕೆ ನಟರಾಜನ್ ಅವರು, ಈ ಸಾಧನೆಗೆ ಆಡಳಿತ ಮಂಡಳಿಯ ದೃಢವಾದ ಬೆಂಬಲ ಮತ್ತು ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ. ಅಧ್ಯಕ್ಷ ಡಾ. ಕೆ.ವಿ. ಚಿದಾನಂದ, ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಜನರಲ್ ಸಕ್ರಟರಿ ಅಕ್ಷಯ್ ಕೆ.ಸಿ., ಮತ್ತು ಕಾರ್ಯದರ್ಶಿ ಡಾ. ಐಶ್ವರ್ಯ ಕೆ.ಸಿ. ಅವರ ಸಹಕಾರದಿಂದಲೇ ಕಾಲೇಜು ಈ ಹಂತ ತಲುಪಲು ಸಾಧ್ಯವಾಯಿತು, ಎಂದು ಹೇಳಿದರು.
ಅವರು ಮುಂದುವರಿಸಿ, ವೈದ್ಯಕೀಯ ಅಧೀಕ್ಷಕರಾದ ಡಾ. ಸಿ. ರಾಮಚಂದ್ರ ಭಟ್, ರಿಜಿಸ್ಟ್ರಾರ್ ಡಾ. ಸಂದೇಶ್ ಕೆ.ಎಸ್., ಓಒಅ ನೋಡಲ್ ಅಧಿಕಾರಿ ಡಾ.ಗೀತಾ ಜೆ. ಡೋಪ್ಪಾ, ವಿಭಾಗಾಧ್ಯಕ್ಷರು ಹಾಗೂ ಎಲ್ಲಾ ಸಿಬ್ಬಂದಿಯ ಪರಿಶ್ರಮ ಮತ್ತು ತಂಡದ ಸಹಕಾರದಿಂದ ಈ ಸಾಧನೆ ಸಾಧ್ಯವಾಯಿತು, ಎಂದು ತಿಳಿಸಿದರು.
ಡಾ.ನೀಲಾಂಬಿಕ್ಸ್ ನಟರಾಜನ್ ಅವರು ಎಲ್ಲಾ ಸಿಬ್ಬಂದಿಯನ್ನು ಅಭಿನಂದಿಸಿ, ಕಾಲೇಜಿನ ಆಡಳಿತ ಮಂಡಳಿಗೆ ತಮ್ಮ ಹತೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.















ವೈದ್ಯಕೀಯ ಅಧೀಕ್ಷಕರಾದ ಡಾ. ಸಿ. ರಾಮಚಂದ್ರ ಭಟ್ ಅವರು, ಆಸ್ಪತ್ರೆಯ ಮೂಲಸೌಕರ್ಯ ಮತ್ತು ಗುಣಮಟ್ಟದ ರೋಗಿ ಸೇವೆಯನ್ನು ವಿಸ್ತರಿಸಲು ನಡೆದ ನಿರಂತರ ಪ್ರಯತ್ನಗಳು ಈ ಸಾಧನೆಯಲ್ಲಿ ಪ್ರಮುಖ ಪಾತ್ರವಹಿಸಿವೆ. ಹೆಚ್ಚುವರಿ ವಿದ್ಯಾರ್ಥಿ ಪ್ರವೇಶದಿಂದ ಶಿಕ್ಷಣ ಮತ್ತು ಸೇವಾ ಚಟುವಟಿಕೆಗಳು ಇನ್ನಷ್ಟು ಬಲಪಡಿಸಲಿವೆ, ಎಂದು ಅಭಿಪ್ರಾಯಪಟ್ಟರು.
ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಈ ಸಾಧನೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ.










