ವಿಶೇಷ ಅನುದಾನ ಯೋಜನೆಯಡಿಯಲ್ಲಿ ಹೆಚ್ಚಿನ ಮೊತ್ತ ನೀಡುವಂತೆ ಶಾಸಕರಿಗೆ ಮನವಿ









ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು| ಭಾಗೀರಥಿ ಮುರುಳ್ಯ ಭೇಟಿ ನೀಡಿದರು.
ಈಗಾಗಲೇ ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ದೇವಾಲಯದ ಜೀರ್ಣೋದ್ಧಾರ ಕಾರ್ಯಕ್ಕೆ 20 ಲಕ್ಷ ರೂಪಾಯಿ ಮಂಜೂರುಗೊಂಡಿದ್ದು, ವಿಶೇಷ ಅನುದಾನ ಯೋಜನೆಯಡಿ ಹೆಚ್ಚಿನ ಮೊತ್ತದ ಅನುದಾನ ಒದಗಿಸುವಂತೆ ಶಾಸಕರಿಗೆ ಮನವಿ ದೇವಾಲಯದ ವತಿಯಿಂದ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸದ್ರಿ ದೇವಾಲಯಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಮರ್ಕಂಜ ಹಾಗೂ ನೆಲ್ಲೂರು ಕೆಮ್ರಾಜೆ ಉಭಯ ಗ್ರಾಮಗಳ ದೇವಸ್ಥಾನಗಳ ಹಾಗೂ ದೈವಸ್ಥಾನಗಳ ಪಂಚಸ್ಥಾಪನೆಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಜಗನ್ನಾಥ ಗೌಡ ಕಾಯರ, ಮಾಜಿ ಅಧ್ಯಕ್ಷರಾದ ರಾಘವ ಗೌಡ ಕಂಜಿಪಿಲಿ, ಸೇವಾ ಸಮಿತಿ ಅಧ್ಯಕ್ಷರಾದ ಕಮಲಾಕ್ಷ ಗೌಡ ಪುರ, ಭಜನಾ ಮಂಡಳಿ ಅಧ್ಯಕ್ಷರಾದ ನವೀನ್ ಅಳವುಪಾರೆ, ಜೀರ್ಣೋದ್ಧಾರ ಸಮಿತಿ ಖಜಾಂಜಿ ಗಣೇಶ್ ರೈ ಪಾರೆಪ್ಪಾಡಿ ಹಾಗೂ ದೇವಾಲಯದ ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.











