ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

0

ಕರಿಕ್ಕಳ ಎಣ್ಮೂರು ಐವತ್ತೂಕ್ಲು ನಿಡ್ವಾಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಅ.25 ರಂದು ಸಾಮೂಹಿಕ ಶನಿ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು. .ಶ್ರೀ ಕ್ಷೇತ್ರದಲ್ಲಿ ಪ್ರತೀ ತಿಂಗಳ ಹುಣ್ಣಿಮೆಯ ದಿನ ರಾತ್ರಿ ಸಾಮೂಹಿಕ ದುರ್ಗಾಪೂಜೆ ನಡೆಯಲಿರುವುದು. ಪ್ರತೀ ತಿಂಗಳ ಎರಡನೇ ಶನಿವಾರದಂದು ಸಾಮೂಹಿಕ ಸತ್ಯನಾರಾಯಣ ಪೂಜೆ . ಪ್ರತೀ ತಿಂಗಳ 4ನೇ ಶನಿವಾರದಂದು ಸಾಮೂಹಿಕ ಶನಿಪೂಜೆ, ಪ್ರತೀ ತಿಂಗಳ ಸಂಕಷ್ಟ ಚತುರ್ಥಿಯಂದು ಸಾಮೂಹಿಕ ಗಣಪತಿ ಹೋಮ ನಡೆಯಲಿರುವುದು ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.