ಸ್ಪಂದನ ಗೆಳೆಯರ ಬಳಗ ಅಡ್ತಲೆ ಇವರ ಪಂಚಸಪ್ತತಿ ಸ್ವಚ್ಛತಾ ಅಭಿಯಾನ- ನಾಲ್ಕನೇ ಕಾರ್ಯಕ್ರಮ

0

ಯುವಜನ ಸಂಯುಕ್ತ ಮಂಡಳಿ (ರಿ.)ಸುಳ್ಯ ಇದರ ಆಶ್ರಯದಲ್ಲಿ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ನಾಲ್ಕನೇ ಕಾರ್ಯಕ್ರಮ ಅರಂತೋಡು ಗ್ರಾಮ ಪಂಚಾಯತಿಯ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮದೊಂದಿಗೆ ನಡೆಯಿತು.

ಗ್ರಾಮ ಪಂಚಾಯತ್ ಅರಂತೋಡು,ಚಂದನ ಯುವತಿ ಮಂಡಲ (ರಿ.) ಅಡ್ತಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆಯ ಸಹಯೋಗದೊಂದಿಗೆ ನಡೆದ ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಸುಮಾರು 30ಕ್ಕೂ ಮಿಕ್ಕಿ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು. ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳ ಸಹಿತ ಅರಂತೋಡು ಪೇಟೆಯಲ್ಲಿ ಸ್ವಚ್ಛತೆಯನ್ನು ಮಾಡಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಜಯಪ್ರಕಾಶ್ ಎಂ.ಆರ್ ಹಾಗೂ ಪಂಚಾಯತ್ ಸಿಬ್ಬಂದಿಗಳು, ಘನತ್ಯಾಜ್ಯ ಘಟಕದ ಸಿಬ್ಬಂದಿಗಳು ಸಹಕರಿಸಿದರು.