ಬೂಡು : ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆ

0

ಅಧ್ಯಕ್ಷ: ವಾಸುದೇವ ನಾಯಕ್ ಕೇರ್ಪಳ, ಪ್ರಧಾನ ಕಾರ್ಯದರ್ಶಿ: ಕು. ಕವಿತಾ ಬೂಡು
ಕೋಶಾಧಿಕಾರಿ: ಮಧುಸೂದನ ಬೂಡು

ಸುಳ್ಯ ಕಸಬಾದ ಬೂಡು ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿಗಳ ಸಂಘ ರಚನೆಯು ಅ.26 ರಂದು ಬೂಡು ಅಂಗನವಾಡಿ ಕೇಂದ್ರದಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ರಾಬಿಯಾ ಬೂಡು ವಹಿಸಿದ್ದರು. ಸಭೆಯನ್ನು ನಿವೃತ್ತ ಶಿಕ್ಷಕರಾದ ಶ್ರೀಮತಿ ಮೀನಾಕ್ಷಿ ಟೀಚರ್ ರವರು ಉದ್ಘಾಟನೆಯನ್ನು ಮಾಡಿ ಯಾವುದೇ ಹಿರಿಯ ವಿದ್ಯಾರ್ಥಿ ಸಂಘಗಳು ಚಟುವಟಿಕೆಯಿಂದ ಕಾರ್ಯನಿರ್ವಹಿಸಿದ ಶಾಲೆ ಅಂಗನವಾಡಿಗಳು ಉತ್ತಮ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಉತ್ತಮ ವಿದ್ಯಾರ್ಥಿಗಳನ್ನು ನೀಡುತ್ತದೆ ಎಂದು ಶುಭ ಹಾರೈಸಿದರು. ಬಳಿಕ ಹಿರಿಯ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ವಾಸುದೇವ ನಾಯಕ್ ಕೇರ್ಪಳ, ಪ್ರಧಾನ ಕಾರ್ಯದರ್ಶಿ ಕು. ಕವಿತಾ ಬೂಡು, ಕೋಶಾಧಿಕಾರಿಯಾಗಿ ಮಧುಸೂದನ ಬೂಡು, ಜತೆ ಕೋಶಾಧಿಕಾರಿಯಾಗಿ ಶ್ರೀಮತಿ ರಾಬಿಯಾ ಬೂಡು, ಉಪಾಧ್ಯಕ್ಷರಾಗಿ ಶಿವಪ್ಪ ಬೂಡು, ಪೂವಪ್ಪ ಬೂಡು, ಜತೆ ಕಾರ್ಯದರ್ಶಿಯಾಗಿ ಪ್ರಕಾಶ ಬೂಡು, ಕ್ರೀಡಾ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಶೆಟ್ಟಿ ಬೂಡು, ಸಾಂಸ್ಕೃತಿಕ ಕಾರ್ಯದರ್ಶಿ ಕು. ಕಾವ್ಯ ಗಣೇಶ್ ಆಚಾರ್ಯ, ನವೀನ ಆಚಾರ್ಯ ಆಯ್ಕೆಯಾದರು. ಅಧ್ಯಕ್ಷರ ನೆಲೆಯಲ್ಲಿ ಮಾತನಾಡಿದ ಶ್ರೀಮತಿ ರಾಬಿಯಾ ಬೂಡುರವರು ಅಂಗನವಾಡಿ ಕೇಂದ್ರದ ಅಭಿವೃದ್ಧಿಗೆ ಹಿರಿಯ ವಿದ್ಯಾರ್ಥಿಗಳ ಸಹಕಾರವನ್ನು ಕೋರಿದರು. ಅಂಗನವಾಡಿ ಕೇಂದ್ರದ ಅನೇಕ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಕು ಕವಿತಾ ಬೂಡುರವರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಬಾಲವಿಕಾಸ ಸಮಿತಿಯ ಸದಸ್ಯರಾದ ಮಧುಸೂದನ ಬೂಡುರವರು ವಂದಿಸಿದರು.