ಬಾಲಕಿಗೆ ಲೈಂಗಿಕ ಕಿರುಕುಳ‌ : ಪೋಕ್ಸೋ ಪ್ರಕರಣ ದಾಖಲು

0

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾದ ಘಟನೆ ಅ.26 ರಂದು ನಡೆದಿದೆ.
ನಿಂತಿಕಲ್ಲಿನ ಬಸ್ ನಿಲ್ದಾಣದಲ್ಲಿ ಕುಳಿತುಕೊಂಡಿದ್ದ ಬಾಲಕಿಗೆ ಗಿರಿಧರ ಎಂಬವರು ಲೈಂಗಿಕ ಕಿರುಕುಳ ನೀಡಿರುವುದಾಗಿ ರಿಕ್ಷಾ ಚಾಲಕರೊಬ್ಬರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ಪೊಕ್ಸೋ ಪ್ರಕರಣ ದಾಖಲಿಸಿರುವುದಾಗಿ ತಿಳಿದು ಬಂದಿದೆ.