ಬೆಂಗಳೂರಿನಲ್ಲಿ ಟ್ರಾಫಿಕ್ ನಲ್ಲಿ ಸಹಾಯಕ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಸಂಪಾಜೆ ಗ್ರಾಮದ ಕೈಪಡ್ಕ ನಿವಾಸಿ ಉದಯ ಹನಿಯಡ್ಕ ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಅ.27 ರಂದು ರಾತ್ರಿ ನಿಧನರಾಗಿದ್ದಾರೆ.
ಅವರಿಗೆ 56 ವರ್ಷ ವಯಸ್ಸಾಗಿತ್ತು.















ಮೃತರು ಹನಿಯಡ್ಕ ಕುಟುಂಬದ ದಿವಂಗತ ಆನಂದ ಗೌಡ ಹಾಗೂ ರುಕ್ಕಿಣಿ ದಂಪತಿಗಳ ಪುತ್ರರಾಗಿದ್ದು . ಸುಮಾರು 30 ವರ್ಷದಿಂದ ಬೆಂಗಳೂರಿನಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ ಇತ್ತೀಚಿಗೆ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು , ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ಡಿಂಪಲ್, ದರ್ಶನ್
ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಸಂಪಾಜೆಯ ಕೈಪಡ್ಕ ಮನೆಗೆ 2 ಗಂಟೆಯೊಳಗೆ ತಲುಪಲಿದೆ ಎಂದು ತಿಳಿದು ಬಂದಿದೆ.










