ದೇವರಕಾನ ಅಂಗನವಾಡಿ ಕಾರ್ಯಕರ್ತೆ ನಂದಿನಿ ಎ.ಯವರಿಗೆ ಬೀಳ್ಕೊಡುಗೆ

0

ಮಕ್ಕಳ ಪಾಲನೆ, ಪೋಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖ – ಉಷಾ ಪ್ರಸಾದ್ ರೈ

ಮಹಿಳಾ ಮತ್ತು ಮಕ್ಕಳ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ, ಐವರ್ನಾಡು ಗ್ರಾಮದ ದೇವರಕಾನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ನಂದಿನಿ ಎ ಇವರಿಗೆ ಅಭಿನಂದನಾ ಕಾರ್ಯಕ್ರಮವು ಅ. 27 ರಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ನಡೆಯಿತು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆ
ಬೆಳ್ಳಾರೆ ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ಅಭಿನಂದಿಸಿ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಬೆಳ್ಳಾರೆ ವಲಯದ ಅಂಗನವಾಡಿ ಕಾರ್ಯಕರ್ತೆಯರು, ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸುರಕ್ಷಾಧಿಕಾರಿಗಳು ಉಪಸ್ಥಿತರಿದ್ದರು.
ಕೋನಡ್ಕ ಪದವು ಅಂಗನವಾಡಿ ಕಾರ್ಯಕರ್ತೆ ನಿವೇದಿತಾ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.