ಪಿಎಂಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಗುತ್ತಿಗಾರು ಇಲ್ಲಿ ಶಾಲಾ ಅಭಿವೃದ್ಧಿ ಮತ್ತು ಮೇಲು ಉಸ್ತುವಾರಿ ಸಮಿತಿಯ ಸಭೆಯು ಇಂದು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ವೆಂಕಟ್ ದಂಬೆಕೋಡಿ. ಇವರ ಅಧ್ಯಕ್ಷತೆಯಲ್ಲಿ ನಡೆಯಿತು ವೇದಿಕೆಯಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷೆ ಪ್ರಸನ್ನ ಅಮೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಉಮಾವತಿ ಉಪಸ್ಥಿತರಿದ್ದರು..









ಸಭೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಾಗೂ ಶಾಲಾ ವಾರ್ಷಿಕೋತ್ಸವ ಹಾಗೂ ಕ್ರೀಡಾಕೂಟ ಸಮುದಾಯದತ್ತ ಶಾಲೆ ನಡೆಸುವ ಬಗ್ಗೆ ಅಲ್ಲದೆ ಇನ್ನಿತರ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಕೂಡ ಸಭೆಯಲ್ಲಿ ಚರ್ಚಿಸಲಾಯಿತು. ವೆಂಕಟ್ ದಂಬೆಕೋಡಿ ಮಾತನಾಡಿ, ನವಂಬರ್ 16 ರಂದು ವಳಲಂಬೆಯಲ್ಲಿ ನಡೆಯುವ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಲ್ಲರೂ ಸೇರಿಕೊಂಡು ಯಶಸ್ವಿಯಾಗಿ ನಡೆಸಿ ಕೊಡಬೇಕೆಂದು ಕೇಳಿಕೊಂಡರು ಶಾಲಾ ಮುಖ್ಯ ಶಿಕ್ಷಕಿ ಉಮಾವತಿಯವರು ಶೈಕ್ಷಣಿಕ ಪ್ರಗತಿ ಮತ್ತು ಅನುದಾನಗಳ ಬಗ್ಗೆ ಮಾಹಿತಿ ನೀಡಿದರು. ವರದಿ.ಡಿ.ಹೆಚ್










