ಅಡಿಕೆ ಬೆಳೆಗಾರರ ಹಿತಕಾಯಲು ಬಿಜೆಪಿ ಬದ್ದವಾಗಿದೆ: ಕ್ಯಾ.ಬ್ರಿಜೇಶ್ ಚೌಟ

0

ಪುತ್ತೂರು: ಅಡಕೆ ಬೆಳೆಗಾರರ ಹಿತರಕ್ಷಣೆಗಾಗಿ ಬಿಜೆಪಿ ಹಾಗೂ ಸ್ಥಳೀ ಯ ಜನಪ್ರತಿನಿಧಿಗಳು ಬದ್ಧರಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆಗೆ ಅಡಕೆಯ ಸಾಂಸ್ಕೃತಿಕ ಪರಂಪರೆ ಮತ್ತು ಹಿನ್ನೆಲೆ ಯನ್ನು ತಿಳಿಸುವ ನಿಟ್ಟಿನಲ್ಲಿ ಸಮಗ್ರ ಚಿಂತನೆ ನಡೆಸಲಾಗುತ್ತಿದೆ ಈ ವಿಚಾರ ಕೇಂದ್ರದ ಉನ್ನತ ಅಧಿಕಾರಿಗಳು ಹಾಗೂ ಸಚಿವರ ಗಮನಕ್ಕೂ ಬಂದಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

ಅಡಕೆ ವಿಚಾರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈಗಾಗಲೇ ಉನ್ನತ ಮಟ್ಟದ ಸಭೆ ಯನ್ನು ನಡೆಸಿದ್ದಾರೆ. ಈ ಸಭೆಯಲ್ಲಿ ಅಡಕೆ ಬೆಳೆಯುವ ಭಾಗದ ಸಂಸ ದರು, ಕೃಷಿ, ಆರೋಗ್ಯ ಅಧಿಕಾರಿಗಳು, ಹಾಗೂ ಉನ್ನತ ಸಂಸ್ಥೆಗಳ ಪ್ರತಿನಿ ಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಹಳದಿ ರೋಗ ಮತ್ತು ಎಲೆ ಚುಕ್ಕೆ ರೋಗದ ಸಮಸ್ಯೆಯನ್ನು ಪ್ರಮುಖ ವಾಗಿ ಉಲ್ಲೇಖಿಸಲಾಗಿದ್ದಯ ಮತ್ತೆ ಅಡಕೆ ಬೆಳೆಯಲು ಒನ್ ಟೈಮ್ ಪ್ಯಾಕೇಜ್ ಘೋಷಿಸಬೇಕು ಮತ್ತು ಪರ್ಯಾಯ ಬೆಳೆಯ ಬಗ್ಗೆ ಪ್ರಯತ್ನ ನಡೆಸಬೇಕೆಂಬ ಬೇಡಿಕೆಗಳನ್ನು ಸಭೆ ಯಲ್ಲಿ ಮಂಡಿಸಲಾಯಿತು ಎಂದರು.

ಕೇಂದ್ರ ಸಚಿವರು ಹಳದಿ ರೋಗ ಪೀಡಿತ ಪ್ರದೇಶಗಳನ್ನು ಖುದ್ದು ವೀಕ್ಷಿಸುವ ಭರವಸೆ ನೀಡಿದ್ದಾರೆ. ಇದರ ಪೂರ್ವಭಾವಿ ಸಭೆಗಳು ಈಗಾಗಲೇ ತೋಟಗಾರಿಕಾ ಇಲಾಖೆಯಿಂದ ನಡೆ ದಿವೆ ಎಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.

ಪರ್ಯಾಯ ಬೆಳೆಗಳ ಬಗ್ಗೆ ಖಾಸಗಿಯಾಗಿಯೂ ಪ್ರಯತ್ನ ನಡೆಯುತ್ತಿದೆ. ಕಾಫಿ ಬೋರ್ಡ್ ಅಧ್ಯಕ್ಷರನ್ನು ಕರೆಸಿ ಜಿಲ್ಲೆಯ ವಿವಿಧೆಡೆ ಕಾಫಿ ಬೆಳೆಯುವ ನಿಟ್ಟಿನಲ್ಲಿ ಮಣ್ಣು ಪರೀಕ್ಷೆ ಮಾಡಿಸಲು ಸೂಚಿಸಲಾಗಿದೆ. ಜಿಲ್ಲೆಯ ಜನತೆ ಕೇವಲ ಅಡಕೆ ಒಂದನ್ನೇ ಅವಲಂಬಿಸ ಬೇಕಾಗಿಲ್ಲ. ಜತೆಗೆ ಕಾಫಿ, ಕಾಳು ಮೆಣ ಸುಗಳನ್ನು ಮಿಶ್ರ ಬೆಳೆಯಾಗಿ ಬೆಳೆ ಯುವ ಯತ್ನ ನಡೆಯಬೇಕು ಎಂದು ಸಂಸದರು ಕರೆ ನೀಡಿದರು. ಅಡಕೆಯ ಔಷಧೀಯ ಗುಣಗಳ ಬಗ್ಗೆಯೂ ಸುಪ್ರೀಂ ಕೋರ್ಟೆ ಮನವರಿಕೆ ಮಾಡು ವ ಪ್ರಯತ್ನಗಳು ನಡೆಯಲಿವೆ ಎಂದು ಸಂಸದ ಬ್ರಿಜೇಶ್ ಚೌಟ ತಿಳಿಸಿದರು.