ಸುಳ್ಯ ಯುವಜನ ಸಂಯುಕ್ತ ಮಂಡಳಿಯಲ್ಲಿ ಜೀವ ಪ್ರಾವೀಣ್ಯ ತರಬೇತಿ ಕಾರ್ಯಾಗಾರ

0

ಸುಳ್ಯ ಯುವಜನ ಸಂಯುಕ್ತ ಮಂಡಳಿ, ಸವಿತಾ ಸಮಾಜ ಸುಳ್ಯ, ತಾಲೂಕು ಬಾರ್ಬಸ್ ಅಸೋಸಿಯೇಷನ್ ಇದರ ಜಂಟಿ ಆಶ್ರಯದಲ್ಲಿ ಅ ೨೮ ರಂದು ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ಜೀವಾ ಪ್ರಾವೀಣ್ಯ ಎಂಬ ಆರೋಗ್ಯ ರಕ್ಷಕ ಕಾರ್ಯಾಗಾರ ನಡೆಯಿತು.

ಎ ಜೆ ಸಂಶೋಧನಾ ಕೇಂದ್ರ ಮತ್ತು ಆಸ್ಪತ್ರೆ ಮಂಗಳೂರು ತಾಂತ್ರಿಕ ತಜ್ಞರಾದ ಡಾ ಫುಝಹಿಲಾ ಇವರು ಜೀವ ರಕ್ಷಕ ಸಿಪಿಆರ್ ಬಗ್ಗೆ ಮಾಹಿತಿ ನೀಡಿ ತರಬೇತಿಯನ್ನ ನೀಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಧಿಕಾರಿ ಡಾ. ನವೀನ್ ಅವರು ನೆರವೇರಿಸಿದರು.

ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷರಾದ ಪವನ್ ಪಲ್ಲತಡ್ಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಯುವಜನ ಸೇವಾ ಸಂಸ್ಥೆಯ ಅಧ್ಯಕ್ಷರಾದ ದೀಪಕ್ ಕುತ್ತಮೊಟ್ಟೆ, ಗೌರವಾಧ್ಯಕ್ಷರಾದ ವಿಜಯಕುಮಾರ್ ಉಬರಡ್ಕ,ಸುಳ್ಯ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಉದಯ ಜಟ್ಟಿಪಳ್ಳ, ಸುಳ್ಯ ತಾಲೂಕು ಬಾರ್ಬರ್ ಅಸೋಸಿಯೇಷನ್ ಅಧ್ಯಕ್ಷ ಪದ್ಮನಾಭಾ ಎಸ್ ಮೊದಲಾದವರು ಉಪಸ್ಥಿತರಿದ್ದರು.
ಯುವಜನ ಸಂಯುಕ್ತ ಮಂಡಳಿಯ ಕಾರ್ಯದರ್ಶಿ ಮುರಳಿ ನಳಿಯೂರು ಸ್ವಾಗತಿಸಿ ಬಾರ್ಬರ್ ಅಸೋಸಿಯೇಷನ್ ನ ಕಾರ್ಯದರ್ಶಿ ಭವಾನಿ ಶಂಕರ್ ಕೇರ್ಪಳ ವಂದಿಸಿದರು.