ಡಾ. ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಸಂಸ್ಥೆ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಮತ್ತು ವೆನ್ ಲಾಕ್ ಆಸ್ಪತ್ರೆ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಅ. 29ರಂದು ಕಾಲೇಜಿನ ಆವರಣದಲ್ಲಿ ನಡೆಯಿತು.









ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಹ್ಮಣ್ಯ ಪಿ.ಎಸ್ ವಹಿಸಿದ್ದರು. ಲಯನ್ಸ್ ಕ್ಲಬ್ ಅಧ್ಯಕ್ಷ ಯತೀಶ್ ಭಂಡಾರಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯ ರಕ್ತಪೂರಣ ಕೇಂದ್ರದ ವೈದ್ಯಾಧಿಕಾರಿ ಡಾ. ದಿವ್ಯಾಂಶ್ ಪ್ರಭಾರ ವೈದ್ಯಾಧಿಕಾರಿ ಡಾ. ಅಶೋಕ್, ಯುವ ರೆಡ್ ಕ್ರಾಸ್ ಕಾರ್ಯಕ್ರಮಾಧಿಕಾರಿ ಮಧು ಎನ್.ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿದ್ದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಘಟಕಾಧಿಕಾರಿ ಗಿರೀಶ್ ಸಿ.ಆರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್.ಎಸ್.ಎಸ್. ಸ್ವಯಂ ಸೇವಕ ಚೇತನ್ ಸ್ವಾಗತಿಸಿ, ಸ್ವಯಂಸೇವಕಿ ಕು. ಅಕ್ಷತಾ ವಂದಿಸಿದರು. ವಿದ್ಯಾರ್ಥಿನಿ ಸ್ವಯಂಸೇವಕಿ ಕು. ಸಿಂಚನ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು, ಐಕ್ಯೂಎಸಿ ಸಂಚಾಲಕಿ ಶ್ರೀಮತಿ ಸುಪ್ರಿಯಾ, ಲಯನ್ಸ್ ಕ್ಲಬ್ ಪೂರ್ವಾಧ್ಯಕ್ಷೆ ಲ. ಉಷಾ ಬಿ. ಭಟ್, ಪೂರ್ವ ಕೋಶಾಧಿಕಾರಿ ಈಶ್ವರ ವಾರಣಾಶಿ ಸಭೆಯಲ್ಲಿ ಉಪಸ್ಥಿತರಿದ್ದರು.











