ಜಿಲ್ಲಾ ಉಪಾಧ್ಯಕ್ಷತೆ ಮತ್ತು ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ















ಸುಳ್ಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ದ.ಕ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್.ಜಯಪ್ರಕಾಶ್ ರೈಯವರು ರಾಜಕೀಯದಿಂದ ನಿವೃತ್ತಿ ಪ್ರಕಟಿಸಿದ್ದಾರೆ.
ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರಿಗೆ ಪತ್ರ ಬರೆದಿರುವ ಅವರು ಜಿಲ್ಲಾ ಉಪಾಧ್ಯಕ್ಷತೆಗೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿಯೂ, ಪ್ರಸ್ತುತ ರಾಜಕೀಯ ನಿವೃತ್ತಿ ಬಯಸಿರುವುದಾಗಿಯೂ ತಿಳಿಸಿದ್ದಾರೆ.










