ಜಮಾಅತ್ ವತಿಯಿಂದ ಸನ್ಮಾನ
ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ ಗಪೂರ್ ರವರು ಒ. 31 ರಂದು ಅರಂತೋಡು ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು.
















ಈ ಸಂದರ್ಭದಲ್ಲಿ ಅವರನ್ನು ಅರಂತೋಡು ಜಮಾಅತ್ ವತಿಯಿಂದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ರವರು ಶಾಲು ಹೊದಿಸಿ ಸನ್ಮಾನಿಸಿದರು. ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ಅಧ್ಯಕ್ಷತೆ ವಹಿಸಿದರು.

ಖತೀಬರಾದ ಬಹು| ಇಸ್ಮಾಯಿಲ್ ಪೈಝಿ ದುವಾ ನೆರವೇರಿಸಿದರು. ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಂ ಮೊಹಮ್ಮದ್, ಕಾರ್ಯದರ್ಶಿ ಕೆ.ಎಂ ಮೂಸಾನ್, ಮಾಜಿ ಅಧ್ಯಕ್ಷ ಹಾಜಿ ಅಬ್ದುಲ್ ಖಾದರ್ ಪಠೇಲ್, ನಿರ್ದೇಶಕರಾದ ಎ.ಹನೀಫ್ , ಮೊಯಿದು ಕುಕ್ಕುಂಬಳ, ಸಂಶುದ್ಧೀನ್ ಪೆಲ್ತಡ್ಕ, ಮುಜೀಬ್ ಅರಂತೋಡು, ಬದುರುದ್ಧೀನ್ ಪಠೇಲ್, ಅಮೀರ್ ಕುಕ್ಕುಂಬಳ, ಅನ್ವಾರುಲ್ ಹುಧಾ ಯಂಗ್ ಮೆನ್ಸ್ ಎಸೋಸಿಯೇಶನ್ ಕಾರ್ಯದರ್ಶಿ ಪಸೀಲು, ಕೋಶಾಧಿಕಾರಿ ಹಾಜಿ ಅಝಾರುದ್ಧೀನ್ , ಸ್ವಲಾತ್ ಸಮಿತಿ ಅಧ್ಯಕ್ಷ ಕೆ.ಎಸ್ ಇಬ್ರಾಹಿಂ ಕುಕ್ಕುಂಬಳ ಮೊದಲಾದವರು ಉಪಸ್ಥಿತರಿದ್ದರು.











