ಸುಳ್ಯ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

0

ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆ ಸುಳ್ಯ ಇಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ನಡೆಯಿತು. ಪ್ರಾರ್ಥನಾ ವಿಧಿಯೊಂದಿಗೆ ಸಭೆ ಪ್ರಾರಂಭಗೊಂಡಿತು. ನಂತರ ಧ್ವಜಾರೋಹಣ ನೆರವೇರಿಸಿ ನಾಡಗೀತೆ ಹಾಡಲಾಯಿತು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೊತೆ ಕಾರ್ಯದರ್ಶಿಗಳಾದ ರೆ|ಫಾ|ಒಲ್ವಿನ್ ಎಡ್ವರ್ಡ್ ಡಿಕುನ್ಹ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಆಗಮಿಸಿ ದೇವಿಪ್ರಸಾದ್ ಜಿ.ಸಿ. ಕಾಯರ್ತೋಡಿ ಇವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ನಗರ ಪಂಚಾಯತ್ ಸದಸ್ಯರಾದ ಶ್ರೀ. ಡೇವಿಡ್ ಧೀರಾಕ್ರಾಸ್ತ ಶುಭಹಾರೈಸಿದರು, ಪ್ರೌಢಶಾಲಾ ಪೋಷಕ ಸಮಿತಿಯ ಉಪಾಧ್ಯಕ್ಷರಾದ ಶ್ರೀಮತಿ ಸುಮಲತ ಶುಭಹಾರೈಸಿದರು.,ಪೂರ್ವ ಪ್ರಾಥಮಿಕ ಶಾಲಾ ಪೋಷಕ ಸಮಿತಿಯ ಉಪಾಧ್ಯಕ್ಷರಾದ ಪ್ರವೀಣ್ ಕುಮಾರ್,ಸೈಂಟ್ ಬ್ರಿಜಿಡ್ಸ್ ಪಾಲನಾ ಮಂಡಳಿ ಕಾರ್ಯದರ್ಶಿ ಶ್ರೀಮತಿ ಜೂಲಿಯ ಕ್ರಾಸ್ತ, ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.


6 ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಪ್ರಣಮ್ಯ ಅವರು ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲ ವಿದ್ಯಾರ್ಥಿಗಳಿಗೆ ದಿನದ ಮಹತ್ವದ ಬಗ್ಗೆ ತಿಳಿಸಿದರು. 6ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಆದ್ವಿ ಪಿ.ಹೆಚ್. ಕನ್ನಡ ರಾಜ್ಯೋತ್ಸವದ ಕುರಿತು ಭಾಷಣ ಮಾಡಿದರು. ರೆ|ಫಾದರ್ ಒಲ್ವಿನ್ ಎಡ್ವರ್ಡ್ ಡಿಕುನ್ಹ ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಸಮೂಹ ನೃತ್ಯ,ಸಮೂಹ ಗಾನವನ್ನು ವಿದ್ಯಾರ್ಥಿಗಳು ನೆರವೇರಿಸಿಬಕೊಟ್ಟರು. 6ನೇ ತರಗತಿ ವಿದ್ಯಾರ್ಥಿನಿ ಭುವಿ ವಂದನಾರ್ಪಣೆಗೈದರು. ಹತ್ತನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಿತಿಕ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಸಹಕರಿಸಿದರು. ರಾಷ್ಟ್ರಗೀತೆಯೊಂದಿಗೆ ಸಭಾ ಕಾರ್ಯಕ್ರಮ ಮುಕ್ತಾಯಗೊಂಡಿತು