ಬೆಳ್ಳಾರೆಯಲ್ಲಿ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ

0

ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಒ.31 ರಂದು ಬೆಳ್ಳಾರೆ – ಸುಳ್ಯ ಮುಖ್ಯ ರಸ್ತೆಯಲ್ಲಿ ನಡೆಸಲಾಯಿತು. ಜ್ಞಾನದೀಪ ವಿದ್ಯಾರ್ಥಿಗಳಿಂದ ಆಶಯ ಗೀತೆ ಹಾಡಿದರು. ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ವಸಂತ ಗೌಡ ಪಡ್ಪು ಸ್ವಾಗತಿಸಿ, ಉಪಾಧ್ಯಕ್ಷ ಶ್ರೀನಿವಾಸ್ ಕುರುoಬುಡೆಲು ವಂದಿಸಿದರು. ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು.