ಎಸ್ ಎಸ್.ಪಿ.ಯು ಕಾಲೇಜು ಅತಿಥ್ಯ,800 ಕ್ಕೂ ಅಧಿಕ ಮಂದಿ ಭಾಗಿಯಾಗಲಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಸೋಮಶೇಖರ ನಾಯಕ್ ಮಾಹಿತಿ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ನೆಟ್‌ಬಾಲ್ ಸ್ಪರ್ಧೆ ೨೦೨೫-೨೬ ನ.3ರಿಂದ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ, ಸುಮಾರು 600 ಮಂದಿ ಕ್ರೀಡಾಳುಗಳು, 200 ಕ್ಕೂ ಅಧಿಕ ಕ್ರೀಡಾ ಅಧಿಕಾರಿಗಳು, ಟೀಮ್ ಮೆನೇಜರ್ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ತಿಳಿಸಿದರು.















ಅವರು ಕಾಲೇಜಿನಲ್ಲಿ ಅ 31 ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ನ.೩ರಂದು ಮಧ್ಯಾಹ್ನ ೧ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಮುಜರಾಯಿ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಧ್ವಜವಂದನೆ ಸ್ವೀಕರಿಸುವರು. ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸುವರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಅಧ್ಯಕ್ಷೆ ಸುಜಾತ ಕಲ್ಲಾಜೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ನ.೩ರಿಂದಲೇ ಸ್ಪರ್ಧೆಗಳು ಆರಂಭಗೊಂಡು, ೫ರ ವರೆಗೆ ನಡೆಯಲಿದೆ. ನ.೫ರಂದು ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ. ಸುಮಾರು ೫೦ಕ್ಕೂ ಅಧಿಕ ತಂಡಗಳು ಆಗಮಿಸುವ ನಿರೀಕ್ಷೆ ಇದೆ. ಐದು ಅಂಕಣಗಳ ಮೂಲಕ ಸ್ಪರ್ಧೆಗಳನ್ನು ನಡೆಸಲಾಗುತ್ತದೆ, ಜೊತೆಗೆ ಹೆಚ್ಚುವರಿ ಎರಡು ಅಂಕಣಗಳನ್ನು ಇಂಟರ್‌ಲಾಕ್ ಮೈದಾನದಲ್ಲೂ ಸಿದ್ಧಪಡಿಸಲಾಗುವುದು ಎಂದರು.ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಸುಬ್ರಹ್ಮಣ್ಯದ ಎಸ್‌ಎಸ್‌ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಇದರಲ್ಲಿ ಆಡಲಿದ್ದಾರೆ. ಸ್ಪರ್ಧಾಳುಗಳಿಗೆ, ದೈಹಿಕ ಶಿಕ್ಷಣ ಶಿಕ್ಷಕರು, ಮಾರ್ಗದರ್ಶಕರು, ನಿರ್ಣಾಯಕರಿಗೆ ಹಾಗೂ ಕ್ರೀಡಾಕೂಟಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ವಸತಿ, ಊಟ-ಉಪಹಾರದ ವ್ಯವಸ್ಥೆಯನ್ನೂ ಕಲ್ಪಿಸಲಾಗುವುದು ಎಂದು ಕ್ರೀಡಾಕೂಟದ ಬಗ್ಗೆ ವಿವರ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ತ್ರಿವೇಣಿ ದಾಮ್ಲೆ, ಜಿಲ್ಲಾ ದೈಹಿಕ ಶಿಕ್ಷಣ ಉಪನ್ಯಾಸಸಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಸಿ., ಹಿರಿಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಲೋಕೇಶ್ ಉಪಸ್ಥಿತರಿದ್ದರು.










