














ಗೂನಡ್ಕ ಮಾರುತಿ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ ವೈಬ್ ಅಂಡ್ ಶೈನ್ ಎಂಬ ಕಾರ್ಯಕ್ರಮದ ಅಡಿಯಲ್ಲಿ ವಿದ್ಯಾರ್ಥಿಗಳಲ್ಲಿ ರಚನೆಯಾಗಿರುವ ವಿವಿಧ ತಂಡಗಳ ನಡುವೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭಾ ಎಂ. ಉದ್ಘಾಟಿಸಿದರು.
ಮೂರನೇ ತರಗತಿಯಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ, ಜಾನಪದ ಹಾಡುಗಳು, ಕಂಠಪಾಠ ಸ್ಪರ್ಧೆ , ಹಣ್ಣು ತರಕಾರಿಗಳ ಮಾದರಿಗಳ ಸ್ಪರ್ಧೆಯನ್ನುಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಶೋಭ ಎಂ. ಈ ರೀತಿಯ ಕರಕುಶಲ ಕಲೆಗಳಿಂದ ವಿದ್ಯಾರ್ಥಿಗಳಲ್ಲಿರುವಂತಹ ಅಭಿರುಚಿ ಏನು ಎಂಬುದನ್ನು ತಿಳಿಯಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಲ್ಲಿ ಹೊಸ ಹೊಸ ರೀತಿಯ ಯೋಚನೆ ಯೋಜನೆಗಳು ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ನುಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಶೋಭಾ ಎಂ, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










