ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಎಲಿಮಲೆ ಜ್ಞಾನದೀಪ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ನಿರ್ದೇಶಕರಾದ ಮಹಾವೀರ ಜೈನ್ ಧ್ವಜಾರೋಹಣವನ್ನು ನೆರವೇರಿಸಿದರು.


ನಂತರ ಸಭಾ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕಿರಣ್ ಗುಡ್ಡೆ ಮನೆ ಇವರು ವಿದ್ಯಾರ್ಥಿಗಳಿಗೆ ಕನ್ನಡ ರಾಜ್ಯೋತ್ಸವದ ಮಹತ್ವ ಹಾಗೂ ಕನ್ನಡ ಭಾಷೆಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.

ನಂತರ ಶಾಲಾ ಶಿಕ್ಷಕಿಯರು ಕನ್ನಡದ ಗೀತೆಯನ್ನು ಹಾಡಿದರು. ಈ ಕಾರ್ಯಕ್ರಮವನ್ನು ಶಾಲಾ ಶಿಕ್ಷಕರಾದ ಅಚ್ಚುತ ಅಟ್ಲೂರ್ ನಿರ್ವಹಿಸಿದರು ಹಾಗೂ ಶಾಲಾ ಶಿಕ್ಷಕಿಯಾದ ಕುಮಾರಿ ರಚಿತ ವಂದಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಗದಾಧರ್ ಬಾಳುಗೋಡು, ಶಿಕ್ಷಕರಕ್ಷಕ ಸಂಘದ ಕಾರ್ಯದರ್ಶಿ ಶ್ರೀಮತಿ ಶೀಲಾವತಿ, ಶಾಲಾ ವಿದ್ಯಾರ್ಥಿ ನಾಯಕ ಶ್ರೇಯಸ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ನಂತರ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚಲಾಯಿತು.