ಮುಳ್ಯ ಅಟ್ಲೂರು ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರರವರ ಅಧ್ಯಕ್ಷತೆಯಲ್ಲಿ ಅ. ೩೦ರಂದು ನಡೆದ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಯಿತು.
ಸುಳ್ಯ ಆರಕ್ಷಕ ಠಾಣೆಯ ಂSI ತಾರಾನಾಥ್ ಮತ್ತು ದೇವರಾಜ್ ಭಾಗವಹಿಸಿ ನಶಾ ಮುಕ್ತ ಭಾರತ ಮತ್ತು ಪೋಕ್ಸೋ ಕಾಯಿದೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ, ಹದಿಹರೆಯದಲ್ಲಿ ಮಕ್ಕಳು ದುಶ್ಚಟಗಳಿಗೆ ದಾಸರಗಬಾರದು. ಒಳ್ಳೆಯ ವ್ಯಕ್ತಿತ್ವವನ್ನು ರೂಡಿಸಿಕೊಳ್ಳಬೇಕು ಎಂದು ತಿಳಿಸಿದರು.















ಶಿಕ್ಷಕ ಪ್ರತಿನಿಧಿ, ಮಕ್ಕಳ ರಕ್ಷಣಾ ಸಂಘದ ಅಧ್ಯಕ್ಷ ರವಿಕುಮಾರ್ ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ವೃಂದದವರು ಪಾಲ್ಗೊಂಡಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಅಲಕನಂದಿನಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಅತಿಥಿ ಶಿಕ್ಷಕಿ ಶ್ರೀಮತಿ ವೀಣಾ ವಂದಿಸಿದರು.










