ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಬಾಳಿಲ ವಿದ್ಯಾಬೋಧಿನೀ ವಿದ್ಯಾಸಂಸ್ಥೆಗಳ ವತಿಯಿಂದ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.
ಶಾಲಾ ಸಂಚಾಲಕರಾದ ಪಿ.ಜಿ.ಎಸ್.ಎನ್ ಪ್ರಸಾದ್ ರಾಜ್ಯೋತ್ಸವದ ಧ್ವಜಾರೋಹಣ ಮಾಡಿದರು. ಶಾಲಾ ಮುಖ್ಯೋಪಾಧ್ಯಾಯರು ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಪ್ರಸಾದ್ ರೈ ಜಿ ಇವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆ, ರೈತ ಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಿಸಲಾಯಿತು. ಶಾಲಾ ಶಿಕ್ಷಕ ವೃಂದ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.