
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇಂದು ಭೇಟಿ ನೀಡಿದರು. ಆದಿ ಸುಬ್ರಹ್ಮಣ್ಯ ಮತ್ತು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಪೂಜೆಯಲ್ಲಿ ಪಾಲ್ಗೊಂಡು ಮಹಾಪೂಜೆ ಸೇವೆ ಸಲ್ಲಿಸಿದರು.








ಈ ಸಂದರ್ಭ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಶಾಸಕಿ ಭಾಗೀರಥಿ ಮುರುಳ್ಯ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಪ್ರಸನ್ನ ದರ್ಭೆ, ಗಿರೀಶ್ ಆಚಾರ್ಯ, ವನಜಾ ಭಟ್, ಶೋಭಾ ಗಿರಿಧರ್, ಭಾರತಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು.











