
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಆವರಣದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ನ.1 ರಂದು ಆಚರಿಸಲಾಯಿತು.
















ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸುಜಾತ ಕಲ್ಲಾಜೆರವರು ಧ್ವಜಾರೋಹಣ ಮಾಡಿದರು.

ಮುಖ್ಯ ಅತಿಥಿಗಳಾಗಿ ಸುಬ್ರಹ್ಮಣ್ಯ ವಿಶ್ರಾಂತ ಉಪನ್ಯಾಸಕ ವಿಶ್ವನಾಥ ನಡುತೋಟ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟೇಶ ಎಚ್ ಎಲ್, ಶಿವರಾಮ ನೆಕ್ರಾಜ್ , ಗಿರೀಶ್ ಆಚಾರ್ಯ ಪೈಲಾಜೆ, ಗ್ರಾಮ ಪಂಚಾಯತ್ ಅಂಗಡಿ ಮಳಿಗೆಗಳ ಮಾಲಿಕರು, ವರ್ತಕರು, ಗ್ರಾಮಸ್ಥರು ಹಾಗೂ ಕಚೇರಿ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಾರ್ಯದರ್ಶಿ ಮೋನಪ್ಪ ಡಿ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.










