ಪಂಜದಲ್ಲಿ ಬೃಹತ್ ರಕ್ತದಾನ ಶಿಬಿರ

0

ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು‌, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಪಂಜ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಅ. 02ರಂದು ನಡೆಯಿತು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು, ಗ್ರಾಮ ಪಂಚಾಯತ್ ಪಂಜ ಹಾಗೂ ಹಲವು ಸಂಘ-ಸಂಸ್ಥೆಗಳು ಸಹಕಾರದೊಂದಿಗೆ ರಕ್ತದಾನ ಶಿಬಿರ ನಡೆದಿದ್ದು, ಪಂಜ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಶಿಬಿರವನ್ನು ಉದ್ಘಾಟಿಸಿದರು.

ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹಿತೇಶ್ ಪಂಜದಬೈಲು ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸಭಾಪತಿ, ಸುಳ್ಯ ತಾಲೂಕು ಪಿ.ಬಿ ಸುಧಾಕರ ರೈ, ಪಂಜ ಲಯನ್ಸ್ ಕ್ಲಬ್ ನಿಕಟಪೂರ್ವ ಅಧ್ಯಕ್ಷ ಶಶಿಧರ ಪಳಂಗಾಯ, ಯುವಜನ ಸಂಯುಕ್ತ ಮಂಡಳಿ ಉಸ್ತುವಾರಿ ನಿರ್ದೇಶಕ ಆದರ್ಶ್ ಚಿದ್ಗಲ್ ಉಪಸ್ಥಿತರಿದ್ದರು. ಕ್ಲಬ್ ವತಿಯಿಂದ ಕಳೆದ 4 ವರ್ಷದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 100 ಕ್ಕೂ ಅಧಿಕ ಯೂನಿಟ್ ರಕ್ತದಾನವಾಗಿದ್ದು, ಇಂದು ಶಿಬಿರದಲ್ಲಿ‌‌ 100 ಯೂನಿಟ್ ಸಂಗ್ರಹವಾಗಿರುತ್ತದೆ. ರಕ್ತದಾನ ಮಾಡಿದವರಿಗೆ ಪ್ರಮಾಣ ಪತ್ರ ವಿತರಿಸಿದರು.