
ವಿಶ್ವ ಹಿಂದೂ ಪರಿಷತ್ ಬಜರಂಗದಳ ಮಾತೃ ಶಕ್ತಿ ದುರ್ಗಾ ವಾಹಿನಿ ಸುಳ್ಯ ನಗರ ಸುಳ್ಯ ಪ್ರಖಂಡ ಇದರ ವತಿಯಿಂದ 3 ನೇ ವರ್ಷದ ಸಾರ್ವಜನಿಕ ಗೋಪೂಜೆ ಕಾರ್ಯಕ್ರಮವು ಚೆನ್ನಕೇಶವ ದೇವಸ್ಥಾನದ ಮುಂಭಾಗದ ಮೈದಾನದಲ್ಲಿ ನ.1ರಂದು ನಡೆಯಿತು.
ಸಂಜೆ ವಿವಿಧ ಭಜನಾ ಮಂಡಳಿಯ ಸದಸ್ಯರಿಂದ ಆಕರ್ಷಕ ಕುಣಿತ ಭಜನೆ ನಡೆಯಿತು.
















ಬಳಿಕ ಗೋಪೂಜೆಯು ನಡೆದು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ
ನೀರಬಿದಿರೆ ದೀಪ ಪ್ರಜ್ವಲಿಸಿದರು.
ದಿಕ್ಸೂಚಿ ಭಾಷಣಕಾರರಾಗಿ ದೈವನರ್ತಕ, ಉಪನ್ಯಾಸಕರಾದ ಡಾ. ರವೀಶ್ ಪಡುಮಲೆ ಧಾರ್ಮಿಕ ಉಪನ್ಯಾಸ ನೀಡಿದರು. ಸುಳ್ಯ ನಗರ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಉಪೇಂದ್ರ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಪ್ರಕಾಶ್, ಬಜರಂಗದಳ ಪುತ್ತೂರು ಜಿಲ್ಲಾ ಸಪ್ತಾಹಿಕ ಮಿಲನ್ ಪ್ರಮುಖ್ ರೂಪೇಶ್ ಪೂಜಾರಿಮನೆ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಪ್ರಧಾನ ಕಾರ್ಯದರ್ಶಿ ನವೀನ್ ಎಲಿಮಲೆ, ಸುಳ್ಯ ಪ್ರಖಂಡದ ಬಜರಂಗದಳ ಸಹ ಸಂಚಾಲಕ ವರ್ಷಿತ್ ಚೊಕ್ಕಾಡಿ, ಬಜರಂಗದಳ ಸಂಚಾಲಕ ರಾಜೇಶ್ ಕಲ್ಲುಮುಟ್ಲು, ಗೋರಕ್ಷ ಪ್ರಮುಖ್ ವಿನಯ್ ಐವರ್ನಾಡು ವೇದಿಕೆಯಲ್ಲಿದ್ದರು.
ಈ ಸಂದರ್ಭದಲ್ಲಿ 16 ವರ್ಷದಿಂದ ಸುಳ್ಯ ನಗರ ಪಂಚಾಯತಿನಲ್ಲಿ ಪೌರಕಾರ್ಮಿಕನಾಗಿ ಸೇವೆ ಸಲ್ಲಿಸಿದ ಗಂಭೀರ ನಾಯಕ್ ರವರನ್ನು ಸನ್ಮಾನಿಸಲಾಯಿತು.
ಅ. 12ರಂದುಮಕ್ಜಳಿಗಾಗಿ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆ, ಗೋಮಾತೆಯ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶ್ರೀಮತಿ ಶುಭ ಕಾಡುತೋಟ ಪ್ರಾರ್ಥಿಸಿದರು. ರಾಜೇಶ್ ಕಲ್ಲುಮುಟ್ಟು ಸ್ವಾಗತಿಸಿ, ನೂತನ್ ಚೆಮ್ನೂರು ವಂದಿಸಿದರು. ಅಭಿಜಿತ್ ಸನ್ಮಾನ ಪತ್ರ ವಾಚಿಸಿದರು.
ತೀರ್ಥೇಶ್ ಯಾದವ್ ನಾರ್ಣಕಜೆ ಕಾರ್ಯಕ್ರಮ ನಿರೂಪಿಸಿದರು.
ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸಿದರು.











