
ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ,ವಕೀಲರ ಸಂಘ ಸುಳ್ಯ, ಸಂತ ಜೋಸೆಫ್ ಇಂಗ್ಲಿಷ್ ಮಾಧ್ಯಮ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ
ಕಾನೂನು ಅರಿವು ಕಾರ್ಯಕ್ರಮ ನ. 3 ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ಸಿವಿಲ್ ನ್ಯಾಯಾಧೀಶರು & ಸದಸ್ಯ ಕಾರ್ಯದರ್ಶಿಗಳಾದ ಅರ್ಪಿತಾ ರವರು ನೆರವೇರಿಸಿ ಮಕ್ಕಳ ಹಕ್ಕುಗಳ ಬಗ್ಗೆ ಇರುವ ಕಾನೂನು ಮಾಹಿತಿಯನ್ನು ನೀಡಿದರು.ಅಧ್ಯಕ್ಷತೆಯನ್ನು ಸಂತ ಜೋಸೆಫ್ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿ ಫಾದರ್ ಆಲ್ವಿನ್ ಎಡ್ವರ್ಡ್ ಡಿಕುನ್ಹಾ ರವರು ವಹಿಸಿದ್ದರು
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ಸುಕುಮಾರ್ ಕೋಡ್ತುಗುಳಿರವರು ಮಾತನಾಡಿ ಮಕ್ಕಳ ಹಕ್ಕುಗಳ ಕಾಯ್ದೆ ಬಗ್ಗೆ ಅರಿವು ನೀಡಿದರು.
















ವೇದಿಕೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕು.ಪ್ರೀತಿ ಎಮ್ ಸಿ , ವಕೀಲರುಗಳಾದ ಹರೀಶ್ ಬೂಡುಪನ್ನೆ,ಜಗದೀಶ್ ಡಿ.ಪಿ, ಶಾಲಾ ಮುಖ್ಯೋಪಾಧ್ಯಾಯಿನಿ ಮೇರಿ,ಪಿ.ಟಿ.ಎ ಉಪಾಧ್ಯಕ್ಷರುಗಳಾದ ಶ್ರೀಮತಿ ಸುಮಲತಾ, ಶ್ರೀಮತಿ ಸುನೀತ ಎಮ್. ಡಿ ಸೋಜಾ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನ್ಯಾಯವಾದಿ ಜಗದೀಶ ಹುದೇರಿ ಯವರು
ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿ ಶಿಬಿರವನ್ನು ನಡೆಸಿಕೊಟ್ಟರು.










