ಚೈತನ್ಯ ಯುವತಿ ಮಂಡಲ ರಿ. ಕೊಲ್ಲಮೊಗರು ಇದರ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಯಿತು.















ಗೌರವಾಧ್ಯಕ್ಷರಾಗಿ ಶ್ರೀಮತಿ ಮೈತ್ರಿ, ಅಧ್ಯಕ್ಷೆಯಾಗಿ ಶ್ರೀಮತಿ ಗಾಯತ್ರಿ, ಕಾರ್ಯದರ್ಶಿಯಾಗಿ ಶ್ರೀಮತಿ ಲತಾ, ಖಜಾಂಜಿಯಾಗಿ ಶ್ರೀಮತಿ ನೀಲಾವತಿ ಸೇರಿದಂತೆ ಇನ್ನಿತರ ಪದಾಧಿಕಾರಿಗಳನ್ನು ಸದಸ್ಯರುಗಳನ್ನು ಹಾಗೂ ಗೌರವ ಸಲಹೆಗಾರರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕ ದಿನೇಶ್ ಹಾಲೆಮಜಲು ಆಯ್ಕೆ ಪ್ರಕ್ರಿಯೆ ನಡೆಸಿದರು. ಮಹಾತ್ಮ ಯುವಕ ಮಂಡಲದ ಗೌರವಾಧ್ಯಕ್ಷ ಚಂದ್ರಶೇಖರ ಕೊನಡ್ಕ, ಉಪಸ್ಥಿತರಿದ್ದು ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಯುವಜನ ಸಂಯುಕ್ತ ಮಂಡಳಿಯೊಂದಿಗೆ ಸೇರಿಕೊಂಡು ಪಂಚ ಸಪ್ತತ್ತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸುವುದನ್ನು ತೀರ್ಮಾನಿಸಲಾಯಿತು.










