














ಆಲೆಟ್ಟಿ ಗ್ರಾಮದ ಬಡ್ಡಡ್ಕ ಆಡಿಂಜ ಎಂಬಲ್ಲಿ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ.
ಮೃತಪಟ್ಟ ಯುವಕ ಆಡಿಂಜ ನಿವಾಸಿ ರವಿ ಎಂದು ತಿಳಿದು ಬಂದಿದೆ. ಮನೆಯಲ್ಲಿ ತಾಯಿ ಮತ್ತು ಮಗ ಮಾತ್ರ ವಾಸವಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಕೃತ್ಯವೆಸಗಿಕೊಂಡಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಪೋಲಿಸರು ತೆರಳಿದ್ದು ಮಹಜರು ನಡೆಸಿರುತ್ತಾರೆ. ಆತ್ಮಹತ್ಯೆ ಗೆ ಕಾರಣ ಏನೆಂದು ತಿಳಿದು ಬಂದಿಲ್ಲ.










