ನಿಡ್ವಾಳ ಕ್ಷೇತ್ರಕ್ಕೆ ಕೋಡಿ ಮಠ ಶ್ರೀಗಳ ಆಗಮನ

0

ನಾಳೆ ನಿಡ್ವಾಳದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ

ಕೋಡಿ ಮಠ ಶ್ರೀಗಳ ಆಶೀರ್ವಚನ

ಸುಳ್ಯ ತಾಲೂಕಿನ ಕರಿಕ್ಕಳ, ಎಣ್ಮೂರು-ಐವತ್ತೊಕ್ಲು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ
ನ. 05 ರಂದು ಶ್ರೀಮಹಾವಿಷ್ಣು ಮಹಾಯಾಗ ನಡೆಯಲಿದ್ದು ಶ್ರೀ ಕ್ಷೇತ್ರಕ್ಕೆ ನ. 4 ರಂದು ಸಂಜೆ ಅರಸೀಕೆರೆ ಕೋಡಿಮಠ ಮಹಾಸಂಸ್ಥಾನದ ಶ್ರೀಶ್ರೀಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ರವರು ಆಗಮಿಸಿದ್ದಾರೆ. ಅವರಿಗೆ ಪೂರ್ಣ ಕುಂಭ, ಆರತಿ ಬೆಳಗಿಸಿ ಆಶೀರ್ವಾದ ಪಡೆದು ಸ್ವಾಗತಿಸಲಾಯಿತು.

ಮಹಾಯಾಗ ಸಮಿತಿಯ ಅಧ್ಯಕ್ಷ ಡಾ.ರವಿ ಕಕ್ಕೆಪದವು, ಪ್ರಧಾನ ಕಾರ್ಯದರ್ಶಿ ಚಂದ್ರಪ್ರಕಾಶ್ ಕಂಬಳ, ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ, ಮಹಾಯಾಗ ಸಮಿತಿಯ ಪದಾಧಿಕಾರಿಗಳು, ಪುನರ್ ನಿರ್ಮಾಣ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.

ನಾಳೆ ನ.5 ರಂದು ಶ್ರೀ ಮಹಾವಿಷ್ಣು ಯಾಗ ಮತ್ತು ಕೋಡಿ ಶ್ರೀಗಳ ಆಶೀರ್ವಚನ ನಡೆಯಲಿದೆ.


ಲೋಕ ಕಲ್ಯಾಣಾರ್ಥವಾಗಿ ಹಾಗೂ 2026ನೇ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಶ್ರೀ ದೇವರ ಪುನಃಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ನೂತನ ದೇವಾಲಯದ ಲೋಕಾರ್ಪಣೆಯ ಪೂರ್ವಭಾವಿಯಾಗಿ, ಅರಸೀಕೆರೆ ಕೋಡಿಮಠ ಮಹಾಸಂಸ್ಥಾನದ ಪರಮಪೂಜ್ಯ ಶ್ರೀಶ್ರೀಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಇವರ ಉಪಸ್ಥಿತಿಯಲ್ಲಿ, ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇ। ಮೂ। ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಊರ ಹಾಗೂ ಪರವೂರ ಭಗವದ್ಭಕ್ತರ ಸಹಕಾರದೊಂದಿಗೆ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ವೇ। ಮೂ। ಅಕ್ಷಯ ಭಟ್ ಬರ್ಲಾಯಬೆಟ್ಟು ಇವರ ಪೌರೋಹಿತ್ಯದಲ್ಲಿ ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀಮಹಾವಿಷ್ಣು ಮಹಾಯಾಗ ಜರಗಲಿರುವುದು.

ಬೆಳಿಗ್ಗೆ ಗಂಟೆ 8 ಕ್ಕೆ ಶ್ರೀ ಮಹಾವಿಷ್ಣು ಮಹಾಯಾಗ ಪ್ರಾರಂಭ . ಬೆಳಿಗ್ಗೆ ಗಂಟೆ 10 ಕ್ಕೆ ಅರಸೀಕೆರೆ ಕೋಡಿಮಠ ಮಹಾಸಂಸ್ಥಾನದ ಶ್ರೀಶ್ರೀಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಮಧ್ಯಾಹ್ನ ಮಹಾಯಾಗದ ಪೂರ್ಣಾಹುತಿ, ಅಷ್ಟಾವಧಾನ ಸೇವೆ, ಮಹಾಪೂಜೆ, ಪ್ರಸಾದ ಭೋಜನ ನಡೆಯಲಿದೆ.