ಕುಲ್ಕುಂದ: ಜಾನುವಾರು ಜಾತ್ರೆ ಸಲುವಾಗಿ ಬಸವೇಶ್ವರ ದೇವಳದಲ್ಲಿ ಗೋಪೂಜೆ

0

ಇತಿಹಾಸ ಪ್ರಸಿದ್ದ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಕಾರದಿಂದ ಐತಿಹಾಸಿಕ ಕುಲ್ಕುಂದ ಬಸವನಮೂಲೆಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಗೋಪೂಜೆ ನಡೆಯಿತು.

ಈ ಮೂಲಕ ಐತಿಹಾಸಿಕ ಜಾನುವಾರು ಜಾತ್ರೆಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ಬುಧವಾರ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಕುಕ್ಕೆ ದೇವಳದಿಂದ ಪುಷ್ಪಾಂಲAಕಾರ ಮಾಡಿ ಗೋವುಗಳನ್ನು ಕರೆತರಲಾಯಿತು. ಬಸವೇಶ್ವರ ದೇವಳದ ಪ್ರಧಾನ ಅರ್ಚಕ ಗಣೇಶ್ ದೀಕ್ಷಿತ್ ವಿವಿಧ ವೈದಿಕ ವಿದಿ ವಿಧಾನಗಳ ಮೂಲಕ ಗೋವುಗಳಿಗೆ ಗೋಪೂಜೆ ನೆರವೇರಿಸಿ, ಗೋಗ್ರಾಸ ನೀಡಿದರು.


ಗೋಪೂಜೆ ಮೂಲಕ ಸಾಂಕೇತಿಕವಾಗಿ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಯನ್ನು ಆಚರಿಸಲಾಯಿತು. ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್.ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಯೇಸುರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಅಜಿತ್ ಕುಮಾರ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಪವನ್ ಎಂ.ಡಿ, ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಅಚ್ಯುತ್ತ ಗೌಡ ಬಳ್ಪ, ಬಸವೇಶ್ವರ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗಿರಿಧರ ಸ್ಕಂದ, ಪ್ರಮುಖರಾದ ಶಿವರಾಮ ರೈ, ವಿಜಯ ಕುಮಾರ್ ನಡುತೋಟ ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.