
ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-೨೦೨೫ ರ ಅಂಗವಾಗಿ ಸ್ಪಂದನ ಗೆಳೆಯರ ಬಳಗ ಅಡ್ತಲೆ ಇವರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ ಇಲ್ಲಿಯ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಕುರಿತ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಒಂದರಿಂದ ನಾಲ್ಕನೇ ತರಗತಿಯ ವಿದ್ಯಾರ್ಥಿಗಳಿಗೆ ನಮ್ಮ ಮನೆ ಸ್ವಚ್ಛ ಮನೆ ಎನ್ನುವ ವಿಷಯದಲ್ಲಿ ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.








ಈ ಸಂದರ್ಭದಲ್ಲಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಮುಕುಂದ ದೇರಾಜೆ, ಶಿಕ್ಷಕಿಯರಾದ ಕು.ತೃಪ್ತಿ, ಶ್ರೀಮತಿ ಅಂಜಲಿ, ಶ್ರೀಮತಿ ಲತಾ ಇವರು ಸ್ಪರ್ಧೆ ನಡೆಸುವಲ್ಲಿ ಸಹಕರಿಸಿದರು. ಸ್ಪಂದನದ ಉಪಾಧ್ಯಕ್ಷರು, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲೋಹಿತ್ ಮೇಲಡ್ತಲೆ, ಕಾರ್ಯದರ್ಶಿ ಸಂತೋಷ್ ಪಿಂಡಿಮನೆ, ಸದಸ್ಯರಾದ ರಕ್ಷಿತ್ ಪಿಂಡಿಮನೆ ಇವರು ಸ್ಪರ್ಧೆಗಳನ್ನು ಆಯೋಜನೆ ಮಾಡುವಲ್ಲಿ ಸಹಕರಿಸಿದರು. ಶಾಲೆಯ ಸುಮಾರು ೩೫ ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.











