
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಯುವ “ಕನ್ನಡ ನಾಡು-ನುಡಿ ಕಲರವ ಸಾಹಿತ್ಯ ಸಂಭ್ರಮ-2025” ಕಾರ್ಯಕ್ರಮವು ವಿವಿಧ ಕಡೆಗಳಲ್ಲಿ ನಡೆಯುತ್ತಿದೆ.
ಕನ್ನಡ ಸಾಹಿತ್ಯ ಪರಿಷತ್ತು ಪಂಜ ಹೋಬಳಿ ಘಟಕ ಹಾಗೂ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇದರ ಸಹಯೋಗದೊಂದಿಗೆ ನ. 6 ರಂದು ಗುತ್ತಿಗಾರು ಪಿ.ಯಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ “ಕನ್ನಡ ನಾಡು-ನುಡಿ ಕಲರವ ಸಾಹಿತ್ಯ ಸಂಭ್ರಮ” ಕಾರ್ಯಕ್ರಮ ನಡೆಯಿತು.

ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಉಮಾವತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಇದರ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು “ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ನವೆಂಬರ್ ತಿಂಗಳಲ್ಲಿ ಏಳು ದಿನಗಳ ಕಾಲ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಾ ಬರುತ್ತಿದ್ದೇವೆ. ಈ ಮೂಲಕ ಏಳು ಸಾವಿರಕ್ಕೂ ಅಧಿಕ ಮಕ್ಕಳನ್ನು ತಲುಪುವ ಕೆಲಸ ಆಗಿದೆ. ಕನ್ನಡವನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು” ಎಂದು ಹೇಳಿದರು.
ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಅವರು ಬಹುಮಾನ ವಿತರಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಗೌಡ ಅಚ್ರಪ್ಪಾಡಿ, ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಕೇನಾಜೆ, ಗೌರವ ಸಲಹೆಗಾರರಾದ ರಾಮಚಂದ್ರ ಪಳಂಗಾಯ, ಶಿವರಾಮ ಶಾಸ್ತ್ರಿ, ಸಂಘಟನಾ ಕಾರ್ಯದರ್ಶಿ ಕುಶಾಲಪ್ಪ ತುಂಬತ್ತಾಜೆ, ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ಪೂರ್ಣಿಮಾ ಮಡಪ್ಪಾಡಿ ಹಾಗೂ ಕಾರ್ಯಕ್ರಮ ಸಂಯೋಜಕರಾದ ಯೋಗೀಶ್ ಹೊಸೊಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ನಾಡು-ನುಡಿಗೆ ಸಂಬಂಧಿಸಿದ ವಿವಿಧ ಸ್ಪರ್ಧೆಗಳಲ್ಲಿ ಪಂಜ ಹೋಬಳಿಯ ಪ್ರಾಥಮಿಕ, ಪ್ರೌಢ ಹಾಗೂ ಕಾಲೇಜಿನ 100ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬಾಬು ಗೌಡ ಅಚ್ರಪ್ಪಾಡಿ ಸ್ವಾಗತಿಸಿ ಕುಶಾಲಪ್ಪ ತುಂಬತ್ತಾಜೆ ಬಹುಮಾನಿತರ ಪಟ್ಟಿಯನ್ನು ವಾಚಿಸಿದರು.
ರಮೇಶ್ ಮೆಟ್ಟಿನಡ್ಕ ಆಶಯಗೀತೆ ಹಾಡಿದರು.
ಶಿಕ್ಷಕರಾದ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು.
ವೆಂಕಪ್ಪ ಕೇನಾಜೆ ವಂದಿಸಿದರು.
ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.
















ಸ್ಪರ್ಧೆಗಳ ಫಲಿತಾಂಶ : ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಗುತ್ತಿಗಾರು ಬ್ಲೆಸ್ಡ್ ಕುರಿಯ ಕೋಸ್ ಶಾಲೆಯ ಮಾನ್ವಿ ರೈ ಪ್ರಥಮ ಸ್ಥಾನ ಹಾಗೂ ವಳಲಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮನ್ವಿತ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ವಳಲಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿತ ಪ್ರಥಮ ಸ್ಥಾನ ಹಾಗೂ ಪೋಷಿತಾ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಗೀತಗಾಯನ ಸ್ಪರ್ಧೆಯಲ್ಲಿ ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಶಾಲೆಯ ಸ್ಕಂದನ್.ಎ.ಹೆಚ್ ಪ್ರಥಮ ಸ್ಥಾನ ಹಾಗೂ ಗುತ್ತಿಗಾರು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ದೇಶಿಕ್.ಎ.ಹೆಚ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕವನ ರಚನೆ ಸ್ಪರ್ಧೆಯಲ್ಲಿ ಗುತ್ತಿಗಾರು ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಆರಾಧ್ಯ ಪ್ರಥಮ ಸ್ಥಾನ ಹಾಗೂ ವಳಲಂಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೃತಿಕ್.ಎನ್.ಡಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಕವನ ರಚನೆ ಸ್ಪರ್ಧೆಯಲ್ಲಿ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಸುಶ್ಮಿತಾ ಪ್ರಥಮ ಸ್ಥಾನ ಹಾಗೂ ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋರ್ಸ್ ಶಾಲೆಯ ತಶ್ವಿನ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಗೀತಗಾಯನ ಸ್ಪರ್ಧೆಯಲ್ಲಿ ಎಲಿಮಲೆ ಜ್ಞಾನದೀಪ ಶಾಲೆಯ ದೇಶ್ವಿ.ಕೆ ಪ್ರಥಮ ಸ್ಥಾನ ಹಾಗೂ ಎಲಿಮಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪೃಥ್ವಿ.ಎ.ಆರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಭಾಷಣ ಸ್ಪರ್ಧೆಯಲ್ಲಿ ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಶಾಲೆಯ ಧೃತಿ.ಕೆ.ವಿ ಪ್ರಥಮ ಸ್ಥಾನ ಹಾಗೂ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಪೂರ್ಣೇಶ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಎಲಿಮಲೆ ಜ್ಞಾನದೀಪ ಶಾಲೆಯ ಸಾನಿಕಾ.ಎಂ.ಯು ಪ್ರಥಮ ಸ್ಥಾನ ಹಾಗೂ ಗುತ್ತಿಗಾರು ಬ್ಲೆಸ್ಡ್ ಕುರಿಯಾಕೋಸ್ ಶಾಲೆಯ ಹೆಚ್.ಆರ್ ಆರಾಧ್ಯ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಭಾಷಣ ಸ್ಪರ್ಧೆಯಲ್ಲಿ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಸಮೀಕ್ಷಾ ಪ್ರಥಮ ಸ್ಥಾನ ಹಾಗೂ ವರ್ಷಾ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಗೀತಗಾಯನ ಸ್ಪರ್ಧೆಯಲ್ಲಿ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ವರ್ಷಾ ಪ್ರಥಮ ಸ್ಥಾನ ಹಾಗೂ ಉಜ್ವಲ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ನವ್ಯಶ್ರೀ ಪ್ರಥಮ ಸ್ಥಾನ ಹಾಗೂ ಹೇಮಂತ್ ಕುಮಾರ್ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಕವನ ರಚನೆ ಸ್ಪರ್ಧೆಯಲ್ಲಿ ಗುತ್ತಿಗಾರು ಸರ್ಕಾರಿ ಪದವಿಪೂರ್ವ ಕಾಲೇಜಿನ ಮೇಘಾ.ಹೆಚ್.ಕೆ ಪ್ರಥಮ ಸ್ಥಾನ ಹಾಗೂ ಡೀಶಾ ಕುಮಾರಿ.ಕೆ.ವಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.










