
ಆರ್ ಪಿ ಕಲಾ ಸೇವಾ ಟ್ರಸ್ಟ್ ಪಾಂಬಾರು ಮತ್ತು ಜ್ಞಾನದೀಪ ಎಜ್ಯುಕೇಷನಲ್ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ ಇವರ ಸಹಾಭಾಗೀತ್ವದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಬೆಳ್ಳಾರೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾ ಭಾವನದಲ್ಲಿ ನಡೆಯಿತು.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಮಕೃಷ್ಣ ಭಟ್ ಕುರುಂಬುಡೇಲು ಶಿಬಿರವನ್ನು ಉದ್ಘಾಟಿಸಿದರು. ಕಾವು ಬಂಗ್ಲೆಗುಡ್ಡೆ ಮುತ್ತು ಮಾರಿಯಮ್ಮ ದೇವಸ್ಥಾನದ ಧರ್ಮದರ್ಶಿ ಚಂದ್ರ ಬಿ, ಹಿರಿಯ ಸಾಹಿತಿ, ಅಂಕಣಕಾರ ನಾರಾಯಣ ರೈ ಕುಕ್ಕುವಳ್ಳಿ, ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷ ಅಶೋಕ ಎಡಮಲೆ, ಗೌರಿಪುರಂ ರಾಜರಾಜೇಶ್ವರಿ ದೇವಸ್ಥಾನದ ಗೌರವಾಧ್ಯಕ್ಷ ಚಂದ್ರಹಾಸ ಮಣಿಯಾಣಿ, ಪ್ರಮೋದ್ ಕುಮಾರ್ ರೈ ಕಲಾ ಮಂದಿರ್, ಕೊಳ್ತಿಗೆ ಮಾರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಬ್ಬಯ್ಯ ನಾಯ್ಕ,ಜ್ಞಾನದೀಪ ಎಜ್ಯುಕೇಷನಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉಮೇಶ್ ಮಣಿಕ್ಕಾರ,ಆರ್ ಪಿ ಕಲಾ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಧರ್ ಎಕ್ಕಡ್ಕ, ಸಂಚಾಲಕ ರವಿ ಪಾಂಬಾರ್ ಉಪಸ್ಥಿತರಿದ್ದರು.















ವಿಷನ್ ಐ ಕೇರ್ ಆಫ್ಟಿಕಲ್ಸ್ ನ ನುರಿತ ನೇತ್ರ ತಜ್ಞರು ಉಚಿತ ತಪಾಸಣೆ ನಡೆಸಿದರು. ನೂರಾರು ಮಂದಿ ಶಿಬಿರದ ಪ್ರಯೋಜನ ಪಡೆದರು.










