ನೆಹರು ಯುವ ಕೇಂದ್ರ ಮಂಗಳೂರು, ಸುಳ್ಯ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಮಾನಸ ಮಹಿಳಾ ಮಂಡಲ ಜಟ್ಟಿಪಳ್ಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಕ್ರೀಡಾಕೂಟ ನ. 16ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಮುಂಭಾಗದ ಜೂನಿಯರ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ.
ಶಾಸಕಿ ಕು. ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸುಳ್ಯ ತಹಶಿಲ್ದಾರ್ ಶ್ರೀಮತಿ ಮಂಜುಳಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯದ ಕ್ರೈ ಇನ್ಸ್ ಪೆಕ್ಟರ್ ಶ್ರೀಮತಿ ಸರಸ್ವತಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಜಿಲ್ಲಾ ಯುವ ಸಮನ್ವಯ ಅಧಿಕಾರಿ ಉಲ್ಲಾಸ್ ಕೆ.ಟಿ.ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದಾರೆ ಎಂದು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಡಿ. ಪ್ರಸಾದ್, ಸುಳ್ಯ ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಮತ್ತು ಜಟ್ಟಿಪಳ್ಳ ಮಾನಸ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶ್ರೀಮತಿ ಚಿತ್ರಲೇಖ ಮಡಪ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯುವತಿಯರಿಗೆ ಖೋಖೋ, ಶಾಟ್ ಪುಟ್, 100 ಮೀ. ಓಟ, ಪುರುಷರಿಗೆ ವಾಲಿಬಾಲ್, ಶಾಟ್ ಪುಟ್ ಮತ್ತು 100 ಮೀ. ಓಟ, ಮಹಿಳೆಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ಸ್ಲೋ ಬೈಕ್ ರೇಸ್, ಶಾಟ್ ಫುಟ್ ಸ್ಪರ್ಧೆಗಳು ನಡೆಯಲಿದೆ.















ಸ್ಪರ್ಧಾಳುಗಳಿಗೆ ಸೂಚನೆ: ಯುವತಿಯರ ಸ್ಪರ್ಧೆಯಲ್ಲಿ ಸ್ಪರ್ಧಿಸಲು 15 ವರ್ಷದಿಂದ 29 ವರ್ಷದೊಳಗಿನವರಿಗೆ ಮಾತ್ರ ಅವಕಾಶ. ಸ್ಪರ್ಧಿಗಳು ಸಂಘ ಸಂಸ್ಥೆಗಳ ಮುಖಾಂತರ ಸ್ಪರ್ಧಿಸಬೇಕು. ಪ್ರಥಮ ಬಹುಮಾನ ಪಡೆದವರು ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಲು ಆಯ್ಕೆಯಾಗುತ್ತಾರೆ. ಬೆಳಿಗ್ಗೆ 9.00 ಗಂಟೆಗೆ ಮುಂಚಿತವಾಗಿ ತಮ್ಮ ಇರುವಿಕೆಯನ್ನು ಗುರುತಿಸಬೇಕೆಂದು ಸಂಘಟಕರು ತಿಳಿಸಿದ್ದಾರೆ.
ಸಂಪರ್ಕಕ್ಕಾಗಿ 9449254247, 9945494530, 9449555502 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.









