














ಸಹಕಾರ ಭಾರತೀಯ ಜಿಲ್ಲಾ ಕಾರ್ಯದರ್ಶಿಯಾಗಿ ಕೂಸಪ್ಪ ಗೌಡ ಮುಗುಪ್ಪು ಇವರು ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾರ್ಯಕಾರಿಣಿಯಿಂದ ಇವರು ನಿಯುಕ್ತಿಗೊಂಡಿದ್ದಾರೆ.
ಇವರು ಬಿಜೆಪಿಯ ತಾಲೂಕು ರೈತ ಮೋರ್ಚಾದ ಅಧ್ಯಕ್ಷರಾಗಿ,ಜಿಲ್ಲಾ ಕಾರ್ಯದರ್ಶಿಯಾಗಿ,ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ತೊಡಗಿಕೊಂಡಿರುವ ಇವರು ಪ್ರಸ್ತುತ ಬೆಳ್ಳಾರೆ ಕಾಮಧೇನು ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.










