
ಸುಳ್ಯ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಅಧ್ಯಕ್ಷರಾಗಿ ಮಹಮ್ಮದ್ ಇಕ್ಬಾಲ್ ಎಲಿಮಲೆ ರವರು ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
















ಉಪಾಧ್ಯಕ್ಷರಾಗಿ ಹಸೈನಾರ್ ಎ ಕೆ ಕಲ್ಲುಗುಂಡಿ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ರಿಟೈನಿಂಗ್ ಅಧಿಕಾರಿಯಾಗಿ ಶಿವಲಿಂಗಯ್ಯ ರವರು ಭಾಗವಹಿಸಿ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಸಂಘದ ಕಾರ್ಯನಿರ್ವಹಣಾಧಿಕಾರಿ ಪ್ರಜ್ವಲ್ ನಾಯ್ಕ್ ಉಪಸ್ಥಿತರಿದ್ದು ಸರ್ವರನ್ನು ಸ್ವಾಗತಿಸಿದರು.
ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಸಭೆಯಲ್ಲಿ ಸದಸ್ಯರಾದ ರಿಯಾಜ್ ಕಟ್ಟೆಕ್ಕಾರ್ಸ್, ಹಾಗೂ ಇನ್ನೋರ್ವ ಹಿರಿಯ ಸದಸ್ಯ ಬಾಪು ಸಾಹೇಬ್ ಹೊರತುಪಡಿಸಿ ಉಳಿದ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು. ಸಭೆ ಆರಂಭವಾಗುವ ಮುನ್ನ ಬಾಪು ಸಾಹೇಬರು ಬಂದು ತೆರಳಿದ್ದರು.










