
ಬೆಳ್ಳಾರೆಯ ಗೌರಿಪುರಂ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಜೀರ್ಣೋದ್ಧಾರ ಕಾರ್ಯಗಳ ಪ್ರಗತಿಯ ಬಗ್ಗೆ ಚರ್ಚಿಸಲು ದ.ಕ. ಸಂಸದ ಬ್ರಿಜೇಶ್ ಚೌಟರನ್ನು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು ನ. 11ರಂದು ಮಂಗಳೂರಿನಲ್ಲಿ ಭೇಟಿ ಮಾಡಿದರು.















ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯಕ್ ಪೊಸವಳಿಗೆ ಪಂಜಿಗಾರು, ಪ್ರಧಾನ ಕಾರ್ಯದರ್ಶಿ ಆರ್.ಕೆ. ಭಟ್ ಕುರುಂಬುಡೇಲು, ಕೋಶಾಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ, ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಮಜಲು, ಸದಸ್ಯರಾದ ಕ್ಯಾ. ಸುಧಾನಂದ ಮಣಿಯಾಣಿ ಉಪಸ್ಥಿತರಿದ್ದರು.










