ಬೆಳ್ಳಾರೆ: ಪೆರುವಾಜೆ ಡಾ.ಕೆ. ಶಿವರಾಮ ಕಾರಂತ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ಸಭೆ

0

ಬೆಳ್ಳಾರೆ: ಪೆರುವಾಜೆ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನ.12 ರಂದು 2025- 2026 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಸಭೆ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಕ್ಷಕ-ಶಿಕ್ಷಕ ಸಂಘದ ಹಿಂದಿನ ಸಾಲಿನ ಅಧ್ಯಕ್ಷರಾದ ರವಿಕುಮಾರ್ ಕಿರಿಭಾಗ ಅವರು ವಿದ್ಯಾರ್ಥಿಗಳ ಹೆತ್ತವರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ವಿದ್ಯಾ ಸಂಸ್ಥೆಯ ಅಭಿವೃದ್ಧಿಯಲ್ಲಿ ರಚನಾತ್ಮಕ ಪಾತ್ರ ವಹಿಸಬೇಕಾದ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಬಾಲಸುಬ್ರಹ್ಮಣ್ಯ ಪಿ. ಎಸ್. ಅವರು ವಹಿಸಿದ್ದರು. ಸಭೆಯಲ್ಲಿ ಸಂಘದ 2025-26 ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಪ್ರಸಕ್ತ ಶೈಕ್ಷಣಿಕ ಸಾಲಿನ ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷರಾಗಿ ರವಿಕುಮಾರ್ ಕಿರಿಭಾಗ ಅವರು ಆಯ್ಕೆಗೊಂಡರು. ಕಾರ್ಯಕ್ರಮದಲ್ಲಿ ವಿಧ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ರಾಮಚಂದ್ರ ಕೆ., ಮತ್ತು ಐ.ಕ್ಯೂ.ಎ.ಸಿ. ಸಂಚಾಲಕರಾದ ಡಾ. ಸುಪ್ರಿಯಾ ಪಿ. ಆರ್., ಅವರು ಉಪಸ್ಥಿತರಿದ್ದರು. ರಕ್ಷಕ ಶಿಕ್ಷಕ ಸಂಘದ ಸಂಚಾಲಕರಾದ ಶ್ರೀಮತಿ ಅರ್ಚನಾ ಪ್ರಾಸ್ತವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಸ್ನಾತಕೋತ್ತರ ಸಮಾಜಕಾರ್ಯದ ವಿಧ್ಯಾರ್ಥಿನಿ ಕು. ದೀಕ್ಷಿತಾ ನೆರವೇರಿಸಿದರು. ಪ್ರಥಮ ಸ್ನಾತಕೋತ್ತರ ಸಮಾಜಕಾರ್ಯದ ವಿಧ್ಯಾರ್ಥಿನಿ ಕು. ದೀಕ್ಷಾ ವಂದನಾರ್ಪಣೆಗೈದರು.