ಎಲಿಮಲೆ ಮಹಮ್ಮದ್ ಹೃದಯಾಘಾತದಿಂದ ನಿಧನ

0

ಎಲಿಮಲೆ ನಿವಾಸಿ ಮಹಮ್ಮದ್ (ಆಡ್ ಮಮ್ಮದ್ಚ) 60 ವರ್ಷ ನ.14 ರಂದು ಬೆಳಿಗ್ಗೆ ಹೃದಯಾಘಾತದಿಂದ ಸುಳ್ಳ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಬೆಳಿಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೆ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತಂದು ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರು ಆಡು ಸಾಕಾಣಿಕೆ ಮಾಡಿ ಜೀವನ ನಡೆಸುತಿದ್ದರು.ಪತ್ನಿ ಆಮಿನ ಹಾಗೂ ಪುತ್ರಿ ಜೊಹರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.