ಮಂಡೆಕೋಲು : ಪಂಚಸಪ್ತತಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಸ್ವಚ್ಛತಾ ಅರಿವು ಕಾರ್ಯಕ್ರಮ

0

ಮಕ್ಕಳ ದಿನಾಚರಣೆ ಪ್ರಯುಕ್ತ ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು , ನೆಹರೂ ಮೆಮೋರಿಯಲ್ ಕಾಲೇಜ್ ಸಮಾಜ ಕಾರ್ಯ ವಿಭಾಗ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 75 ದಿನಗಳ ಸ್ವಚ್ಚತಾ ಅಭಿಯಾನ ಪಂಚಸಪ್ತತಿ 2025 ರ ಅಂಗವಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪುತ್ಯ ಮಂಡೆಕೋಲು ಇಲ್ಲಿ ಮಕ್ಕಳಿಗೆ ಸ್ವಚ್ಚತಾ ಅರಿವು ಕಾರ್ಯಕ್ರಮ,ಸ್ವಚ್ಛ ಜಾಗೃತಿ ಬೀದಿ ನಾಟಕ ಹಾಗೂ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಫರ್ಧೆ ಮತ್ತು ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಯಿತು.


ಸ್ವಚ್ಚತೆಯ ಬಗ್ಗೆ ನಿವೃತ್ತ ಶಿಕ್ಷಕಿ ಚಂದ್ರಾವತಿಯವರು ಮಕ್ಕಳಿಗೆ ಮಾಹಿತಿಯನ್ನು ನೀಡಿದರು. ನೆಹರೂ ಮೆಮೋರಿಯಲ್ ಕಾಲೇಜ್ ಸಮಾಜ ಕಾರ್ಯದ ಉಪನ್ಯಾಸಕಿ ಶೋಭಾರವರು ಮಕ್ಕಳು ತಮ್ಮ ವೈಯಕ್ತಿಕ ಸ್ವಚ್ಚತೆ ಮತ್ತು ಪ್ಲಾಸ್ಟಿಕ್ ನಿಷೇಧದ ಬಗ್ಗೆ ಆರೋಗ್ಯದ ಬಗ್ಗೆ ಆಗುವ ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಚಿತ್ರಕಲೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರ ಮತ್ತು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು .ಈ ಸಂದರ್ಭದಲ್ಲಿ ಅಂಗನವಾಡಿ ಮಕ್ಕಳಿಗೂ ಹಮ್ಮಿಕೊಂಡ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಯುವಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷೆ ವಿನುತ ಪಾತಿಕಲ್ಲು, ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ದ ಅಧ್ಯಕ್ಷೆ ವಸಂತಿ ಉಗ್ರಾಣಿಮನೆ, ಗ್ರಾಮ ಪಂಚಾಯತ್ ಸದಸ್ಯೆ ಗೀತಾ ಎಂ.ಎಸ್, ಶಾಲಾ ಮುಖ್ಯೋಪಾಧ್ಯಾಯಿನಿ ಭವಾನಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು , ಸಂಘದ ಪದಾಧಿಕಾರಿಗಳು , ಎನ್ಎಂಸಿ ಯ ಬಿಎಸ್ ಡಬ್ಲ್ಯು ವಿಭಾಗದ ವಿದ್ಯಾರ್ಥಿಗಳು ,ಗ್ರಾಮಸ್ಥರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ನಂತರ ಎನ್.ಎಂ.ಸಿ.ವಿದ್ಯಾರ್ಥಿಗಳಿಂದ ಸ್ವಚ್ಚತೆ ಬಗ್ಗೆ ಬೀದಿ ನಾಟಕ ಪ್ರದರ್ಶನ ನಡೆಯಿತು.