ಯೇನೆಕಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ನಿವೃತ್ತ ಶಿಕ್ಷಕಿ ರತ್ನಾವತಿ ಪೂಂಬಾಡಿಯವರಿಗೆ ಬೀಳ್ಕೊಡುಗೆ

0

ಯೇನೆಕಲ್ಲು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು 27 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಅ. 31ರಂದು ನಿವೃತ್ತರಾದ ರತ್ನಾವತಿ ಪೂಂಬಾಡಿಯವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನ. 14ರಂದು ನಡೆಯಿತು. ನಿವೃತ್ತ ಶಿಕ್ಷಕಿ ಶ್ರೀಮತಿ ಇಂದಿರಾ ರಾಮಯ್ಯ ಮಾದನಮನೆ ಶ್ರೀಮತಿ ರತ್ನಾವತಿಯವರನ್ನು ಸನ್ಮಾನಿಸಿ, ಶುಭ ಹಾರೈಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಕುಮಾರ್ ಪೈಲಾಜೆ, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯರಾದ ಮೋಹನ್ ಕೋಟಿಗೌಡನಮನೆ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಮಾದನಮನೆ, ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಹಾಗೂ ಮಾಜಿ ಸೈನಿಕರಾದ ಭವಾನಿಶಂಕರ ಪೂಂಬಾಡಿ, ಸಂಸ್ಥೆಯ ಮುಖ್ಯ ಗುರುಗಳಾದ ಶ್ರೀಮತಿ ಚಂದ್ರಿಕಾ ಬಿ‌.ಸಿ ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕರಾದ ಶ್ರೀಮತಿ ಯನ್.ಕೆ ಭುವನೇಶ್ವರಿ, ನಿವೃತ್ತ ಶಿಕ್ಷಕಿ ಶ್ರೀಮತಿ ಲೀಲಾವತಿ ಪರಮಲೆ, ಯೇನೆಕಲ್ಲು ಸರಾಸರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು, ಹಿರಿಯ ವಿದ್ಯಾರ್ಥಿ ಗಳು, ಎಸ್.ಡಿ.ಎಂ.ಸಿ ಉಪಾಧ್ಯಕ್ಷರು ಮತ್ತು ಸದಸ್ಯರು, ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಿದ್ದರು. ಸಂಸ್ಥೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಚಂದ್ರಿಕಾ ಬಿ.ಸಿ ಸ್ವಾಗತಿಸಿ, ಶಿಕ್ಷಕ ಕೀರ್ತಿರಾಜ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಕಮಲ ಸಿ ನಿವೃತ್ತ ಶಿಕ್ಷಕರ ಬಗ್ಗೆ ಅನುಭವಗಳನ್ನು ಹಂಚಿಕೊಂಡರು. ಗೌರವ ಶಿಕ್ಷಕರಾದ ಶ್ರೀಮತಿ ಸುಮಿತ್ರ ಸನ್ಮಾನ ಪತ್ರ ವಾಚಿಸಿದರು. ಸಹಶಿಕ್ಷಕಿ ಶ್ರೀಮತಿ ಅಂಬಿಕಾ ಎನ್ ಕಾರ್ಯಕ್ರಮ ನಿರೂಪಿಸಿದರು.