















ಬೆಳ್ಳಾರೆಯ ಸ್ನೇಹಿತರ ಕಲಾ ಸಂಘದ ಆಶ್ರಯದಲ್ಲಿ ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆಯನ್ನು ನ. 14ರಂದು ಆಚರಿಸಲಾಯಿತು.
ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಇದರ ಅಧ್ಯಕ್ಷ ವಸಂತ ಗೌಡ ಪಡ್ಪುರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ನಮಿತಾ ಎಲ್. ರೈ ಉದ್ಘಾಟಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಬೆಳ್ಳಾರೆ ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ, ಸುಳ್ಯ ಸುದ್ದಿ ಸಮೂಹ ಮಾಧ್ಯಮದ ವರದಿಗಾರ ಈಶ್ವರ ವಾರಣಾಶಿ ಮತ್ತು ಬೆಳ್ಳಾರೆ ಚಿತ್ಕಲಾ ಆರ್ಟ್ ನ ನಿರ್ದೇಶಕಿ ಶ್ರೀಮತಿ ಶಮಿತಾ ಪಿ ರೈ ಅತಿಥಿಗಳಾಗಿ ಭಾಗವಹಿಸಿದ್ದರು. ಅಂಗನವಾಡಿ ಕೇಂದ್ರದ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಿಕಾ ಕೆ ಮತ್ತು ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಭಾರತಿ ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಸಂತ ಪಡ್ಪು ಸ್ವಾಗತಿಸಿ, ಶ್ರೀಮತಿ ಭಾರತಿ ಕೆ ವಂದಿಸಿದರು. ಪೋಷಕರಾದ ಶ್ರೀಮತಿ ನಯನ ಮತ್ತು ಶ್ರೀಮತಿ ಮಮತಾ ಪ್ರಾರ್ಥಿಸಿದರು. ಸಂಜಯ್ ನೆಟ್ಟಾರು ಕಾರ್ಯಕ್ರಮ ನಿರೂಪಿಸಿದರು. ಅಂಗನವಾಡಿ ಪುಟಾಣಿಗಳಿಗೆ ಮತ್ತು ಪೋಷಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದ ಕೊನೆಯಲ್ಲಿ ಸಹಭೋಜನ ನಡೆಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಪುಟಾಣಿಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಅಂಗನವಾಡಿ ಸಹಾಯಕಿ ಶ್ರೀಮತಿ ಸುಜಾತ
ಸಹಕರಿಸಿದರು.











