
ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ಸುಳ್ಯ ವಕೀಲರ ಸಂಘ, ಸುಳ್ಯ ಸರಕಾರಿ ಹಿರಿಯ ಪ್ರಾಥಾಮಿಕ ಶಾಲೆ ಜಟ್ಟಿಪಳ್ಳ
ಇವರ ಸಂಯುಕ್ತಾಶ್ರಯದಲ್ಲಿ
ನ 14 ರಂದು ಮಕ್ಕಳ ದಿನಾಚರಣೆ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಸುಳ್ಯ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಅರ್ಪಿತಾರವರು ನೆರವೇರಿಸಿ ಪುಟಾಣಿ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ಗುರು ಹಿರಿಯರನ್ನು ಗೌರವಿಸಿ ಪಾಠ ಕಲಿಯುವ ಶಾಲೆಗೆ ಹಾಗೂ ತಂದೆ ತಾಯಂದಿರಿಗೆ ಕೀರ್ತಿ ತರುವ ಮೂಲಕ ಒಳ್ಳೆಯ ವಿದ್ಯಾರ್ಥಿಗಳಾಗಿ ಉತ್ತಮ ಮಕ್ಕಳಾಗಿ ಮೂಡಿ ಬರುವ ಬಗ್ಗೆ ಹಿತವಚನವನ್ನು ನೀಡಿದರು.
















ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ರಶ್ಮಿ ಕೆ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದ ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿರವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಶುಭಾಶಯಗಳನ್ನು ನೀಡಿದರು.
ವೇದಿಕೆಯಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಕು.ಪ್ರೀತಿ,
ಶಾಲಾ ಮುಖ್ಯೋಪಾಧ್ಯಾಯರು ಶ್ರೀಮತಿ ಸುವರ್ಣಲತಾ ಪಿ. ಆರ್
ಶಿಕ್ಷಕಿ ಶ್ರೀಮತಿ ಕೇಸರಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ನ್ಯಾಯವಾದಿಗಳಾದ ಚಂದ್ರಶೇಖರ ಉದ್ದಂತಡ್ಕ ರವರು ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಮುಖ್ಯೋಪಾಧ್ಯಾಯನಿ ಶ್ರೀಮತಿ ಸುವರ್ಣ ಲತಾ ಸ್ವಾಗತಿಸಿ ಶಿಕ್ಷಕರುಗಳಾದ ಶ್ರೀಮತಿ ಕೇಸರಿ ಕಾರ್ಯಕ್ರಮ ನಿರೂಪಿಸಿ ಶ್ರೀಮತಿ ಸುಖಿ ವಂದಿಸಿದರು.










