ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ

0

ಸುಳ್ಯದ ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ದೀಪ ಪ್ರಜ್ವಲಿಸುವುದರೊಂದಿಗೆ, ಜವಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರು ಬೆಳಗಿನ ಅಸೆಂಬ್ಲಿಯನ್ನು ನಡೆಸಿಕೊಟ್ಟರು.

ವಿದ್ಯಾರ್ಥಿಗಳಿಗಾಗಿ ಶಿಕ್ಷಕರೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದು, ವಿದ್ಯಾರ್ಥಿಗಳಿಗೆ ಮನೋರಂಜನೆಯ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಕರು ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಿದರು.

ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಮಲ್ಲಿಕಾ ಎಂ.ಎಲ್ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ.ಆರ್ ಹಾಗೂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ, ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಟ್ರಸ್ಟಿ ಮೌರ್ಯ ಆರ್ ಪ್ರಸಾದ್ ಶುಭ ಹಾರೈಸಿದರು.