ಲಯನ್ಸ್ ಕ್ಲಬ್ ವತಿಯಿಂದ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನಾಚರಣೆ‌‌ ಹಾಗೂ ಮಹಿಳಾ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ

0

ಎಂ ಬಿ ಫೌಂಡೇಶನ್ ‌ನ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಾಂದೀಪ್ ವಿಶೇಷ ಮಕ್ಕಳ ಶಾಲೆಯಲ್ಲಿ ಮಾಜಿ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನ ಅಂಗವಾಗಿ ಮಕ್ಕಳ ದಿನಾಚರಣೆ ಹಾಗೂ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಕಾರ್ಯಕ್ರಮ ಲಯನ್ಸ್ ಕ್ಲಬ್ ಮತ್ತು ಮಹಿಳಾ ಸಮಾಜ ವತಿಯಿಂದ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಹಿತೈಸಿ ನಿವೃತ್ತ ಬಿಡಿಒ ಮೀನಾಕ್ಷಿ ಗೌಡ ನೆರವೇರಿಸಿದರು.


ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ ಸಭಾಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಮಲ್ಲಿಕಾರ್ಜುನ ,ಮಹಿಳಾ ಸಮಾಜ ಒಕ್ಕೂಟದ ಅಧ್ಯಕ್ಷೆ ಪುಷ್ಪಾರಾಧಕೃಷ್ಣ,ಎಂ ಬಿ ಫೌಂಡೇಶನ್ ಹಿರಿಯ ಟ್ರಸ್ಟಿ ನೇತ್ರಾವತಿ ಪಡ್ಡಂಬೈಲು ಸೇರಿದಂತೆ ಅನೇಕ ಗಣ್ಯರು ಲಯನ್ಸ್ ಕ್ಲಬ್ ಪಧಾದಿಕಾರಿಗಳು, ಮಹಿಳಾ ಸಮಾಜ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಕೋಶಾಧಿಕಾರಿ ಜತ್ತಪ್ಪ ರೈ ಸ್ವಾಗತಿಸಿ ವಂದಿಸಿದರೂ.
ಪ್ರೆಸ್ ಕ್ಲಬ್ ಅಧ್ಯಕ್ಷ ಎಂ ಬಿ ಫೌಂಡೇಶನ್ ಟ್ರಸ್ಟಿ ಶರೀಫ್ ಜಟ್ಟಿಪಳ್ಳ ಹಾಗೂ ಸಾಂದೀಪ್ ಶಾಲೆ ಪ್ರಾಂಶುಪಾಲರಾದ ಹರಿಣಿ ಸದಾಶಿವ ಕಾರ್ಯಕ್ರಮ ನಿರೂಪಿಸಿದರು.