ಕೊಯನಾಡು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯನಾಡು ಇಲ್ಲಿ ದಿನಾಂಕ 14-11-2025 ರಂದು ಮಕ್ಕಳ ದಿನಾಚರಣೆ ಹಾಗೂ ಶಿಕ್ಷಕ–ಪೋಷಕರ ಮಹಾಸಭೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
















ಕಾರ್ಯಕ್ರಮದಲ್ಲಿ ದಾಖಲಾತಿ ಆಂದೋಲನದಲ್ಲಿ ಪೋಷಕರು ಸಹ ಸಕ್ರಿಯವಾಗಿ ಭಾಗಿಯಾಗುವಂತೆ ಮನವಿ ಮಾಡಲಾಯಿತು. ಜೊತೆಗೆ ಬಾಲ್ಯ ವಿವಾಹ ನಿರ್ಬಂಧ, ಬಾಲಕಾರ್ಮಿಕತೆ, ಪೋಕ್ಸೋ ಕಾಯಿದೆ, ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ನೀಡುವ ಸೌಲಭ್ಯಗಳು, ಮಕ್ಕಳಲ್ಲಿ ಪರೀಕ್ಷಾ ಭಯ ನಿವಾರಣೆಯ ವಿಧಾನಗಳು ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಪೋಷಕರಿಗೆ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮಕ್ಕೆ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ಪುರುಷೋತ್ತಮ್ ಬಿ.ಯು ರವರು ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವನಿತಾಮಣಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ಶ್ರೀಮತಿ ಆಶಾ ಮೋಹನ್, ಗ್ರಾಮ ಪಂಚಾಯತ್ ಸದಸ್ಯ ಶ್ರೀ ನವೀನ್ ಕುಮಾರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀ ಹನೀಫ್ ಎಸ್.ಪಿ, ಶಿಕ್ಷಕ ವೃಂದ, ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು, ಪೋಷಕರಿಗಾಗಿ ಭೋಜನ ವ್ಯವಸ್ಥೆಯನ್ನು ಸಹ ಮಾಡಲಾಗಿತ್ತು.










