ವಿನೋಬನಗರ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿನೂತನ ಕಾರ್ಯ
ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೋಬನಗರ ಜಾಲ್ಸುರು ಇಲ್ಲಿ ವೃಕ್ಷಮಾತೆ ನಾಡೋಜ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ. ಸಾಲುಮರದ ತಿಮ್ಮಕ್ಕರವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಮೌನ ಪ್ರಾರ್ಥನೆಯ ಮೂಲಕ ಸಲ್ಲಿಸಲಾಯಿತು.
















ಸಂಸ್ಥೆಯ ಆಡಳಿತ ಅಧಿಕಾರಿ ಸಿ.ಎನ್ ಗೋಪಾಲ್ ರಾವ್ ರವರು ನುಡಿ ನಮನ ಸಲ್ಲಿಸಿ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕರವರ ಸವಿನೆನಪಿಗಾಗಿ ಗಿಡವನ್ನು ನೆಟ್ಟರು.
ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕರಾದ ಶಶಿಧರ ಇವರು ಅಗಲಿದ ಸಾಲು ಮರದ ತಿಮ್ಮಕ್ಕ ರವರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ಗಿರೀಶ್ ಕುಮಾರ್ ಹಾಗೂ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ಜಯಪ್ರಸಾದ್ ಕಾರಿಂಜ, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು, ಸಂಸ್ಥೆಯ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.










