ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಆಮಂತ್ರಣ ಪತ್ರ ಬಿಡುಗಡೆ

0

ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಮತ್ತು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ನ. 16ರಂದು ನಡೆಯಿತು. ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀಮತಿ ಉಮಾವತಿ ಮತ್ತು ಸೀತಾರಾಮ ಪೂಜಾರಿ ಪಡ್ಕಿಲಾಯ ಮತ್ತು ಕ್ಯಾಲೆಂಡರನ್ನು ಶ್ರೀಮತಿ ನಯನ ಮೋಹನ್ ಅಗಳ್ತ ಬಿಡುಗಡೆ ಮಾಡಿದರು. ದೇವಸ್ಥಾನದ ಆಡಳಿತ ಮೊಕ್ತೇಸರರು ಮತ್ತು ಪ್ರಧಾನ ಅರ್ಚಕರಾದ ಎಂ.ವಿ. ಶ್ರೀವತ್ಸ ದೇವತಾ ಪ್ರಾರ್ಥನೆ ನೆರವೇರಿಸಿದರು. ಉತ್ಸವ ಸಮಿತಿ ಪದಾಧಿಕಾರಿಗಳು, ಬೈಲುವಾರು ಸಮಿತಿ ಸಂಚಾಲಕರು ಮತ್ತು ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.