ಸುಳ್ಯ ಯುವಜನ ಸಂಯುಕ್ತ ಮಂಡಳಿ ವರ್ಣ ಸಂಗಮ : ಬಹುಮಾನ ವಿತರಣಾ ಸಮಾರಂಭ

0

ಸುಳ್ಯದ ಯುವಜನ ಸಂಯುಕ್ತ ಮಂಡಳಿ ನೇತೃತ್ವದಲ್ಲಿ ನ 9ರಂದು ನಡೆದ ವರ್ಣಸಂಗಮ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನ.16ರಂದು ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆಯಿತು.

ಚಿತ್ರಕಲಾ ಶಿಕ್ಷಕ ಸತೀಶ್ ಪಂಜ ಮುಖ್ಯ ಅತಿಥಿಗಳಾಗಿದ್ದು ಬಹುಮಾನ ವಿತರಿಸಿ, ಶುಭಹಾರೈಸಿದರು. ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ಪವನ್ ಪಲ್ಲತಡ್ಕ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ವಿಜಯ ಕುಮಾರ್ ಉಬರಡ್ಕ, ಪೂರ್ವಾಧ್ಯಕ್ಷ ಪ್ರವೀಣ್ ಕುಮಾರ್ ಜಯನಗರ, ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು ವೇದಿಕೆಯಲ್ಲಿದ್ದರು.
ಕೋಶಾಧಿಕಾರಿ ಲೋಹಿತ್ ಬಾಳಿಕಲ ಸ್ವಾಗತಿಸಿದರು. ಉಪಾಧ್ಯಕ್ಷೆ ವಿನುತಾ ಪಾತಿಕಲ್ಲು ವಂದಿಸಿದರು. ಅಮಿತ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.