ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ, ಸುಳ್ಯದ ನ್ಯಾಯವಾದಿ ಹಾಗೂ ನೋಟರಿ ಅಬೂಭಕ್ಕರ್ ಅಡ್ಕಾರ್ ರವರನ್ನು ಕೆ ಎಸ್ ಆರ್ ಟಿ ಸಿ ಕಾನೂನು ಸಲಹೆಗಾರರಾಗಿ ಸರಕಾರ ನೇಮಕ ಮಾಡಲಾಗಿದೆ.
ಅಬೂಭಕ್ಕರ್ ಅಡ್ಕಾರ್ ರವರು ಕಳೆದ ಇಪ್ಪತ್ತು ವರ್ಷಗಳಿಂದ ಸುಳ್ಯದಲ್ಲಿ ನ್ಯಾಯವಾದಿಯಾಗಿ ನೋಟರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಪ್ಯಾನಲ್ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಜಂಯ್ಯತುಲ್ ಪಲಾಹ್ ಸಂಘಟನ ಕಾರ್ಯದರ್ಶಿಯಾಗಿ ಹಲವಾರು ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಪಧಾದಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಸ್ತುತ ಸುಳ್ಯ ಜಾಲ್ಸೂರು ಗ್ರಾಮದ ಅಡ್ಕಾರ್ ನಲ್ಲಿ ಕುಟುಂಬ ಸಮೇತರಾಗಿ ನೆಲೆಸಿದ್ದಾರೆ.
ಇವರು ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿಯಲ್ಲಿರುವ ಕೆ.ಆರ್ ಕಾಂಪ್ಲೆಕ್ಸ್ ನಲ್ಲಿ ಕಛೇರಿ ಹೊಂದಿದ್ದಾರೆ..

























